ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​

author img

By

Published : Aug 25, 2022, 3:17 PM IST

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಥಾವರ್ ಚಂದ್ ಗೆಹ್ಲೋಟ್​

ಉಡುಪಿ ಶ್ರೀಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಭೇಟಿ ನೀಡಿದ್ದಾರೆ. ಸ್ಥಳೀಯ ಶಾಸಕ ಕೆ.ರಘುಪತಿ ಭಟ್ ಜೊತೆಗಿದ್ದರು.

ಉಡುಪಿ: ಜಿಲ್ಲಾ ರಜತೋತ್ಸವ ಉದ್ಘಾಟನೆಗೆ ಆಗಮಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಕೆ.ರಘುಪತಿ ಭಟ್ ಇದ್ದರು.

ಇದನ್ನೂ ಓದಿ: ಜಿನ್ನಾ ಮತ್ತು ಸಾವರ್ಕರ್ ಇಬ್ಬರೂ ಒಂದೇ ಎಂದ ಕಾಂಗ್ರೆಸ್​ ನಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.