ETV Bharat / state

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.. ಮುಕಾಂಬಿಕೆ ದರ್ಶನ

author img

By ETV Bharat Karnataka Team

Published : Jan 18, 2024, 5:13 PM IST

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಕೊಲ್ಲೂರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉಡುಪಿ (ಕೊಲ್ಲೂರು): ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಕುಟುಂಬ ಸಮೇತ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಮಧ್ಯಾಹ್ನ 1.30ರ ವೇಳೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸಲಾಯಿತು.

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಈ ವೇಳೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೂ ಆಗಿರುವ ಹೆಬ್ಬಾಳ್ಕರ್​ ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಸತ್ಕರಿಸಲಾಯಿತು. ಬಳಿಕ ಕುಟುಂಬ ಸದಸ್ಯರೊಂದಿಗೆ ಭೋಜನ ಸ್ವೀಕರಿಸಿದರು. ಸಚಿವರನ್ನು ದೇವಸ್ಥಾನದ ಆವರಣದಲ್ಲಿ ಕಂಡ ತಕ್ಷಣ ಕೆಲವರು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಆದರೆ, ಸಚಿವರ ಭೇಟಿ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಇದನ್ನೂ ಓದಿ: ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬುಧವಾರ ರಾತ್ರಿ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪರ್ಯಾಯ ಶ್ರೀಕೃಷ್ಣ ಪೂಜಾ ಕೈಂಕರ್ಯ ನೇರವೇರಿಸಲಿರುವ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಕೃಷ್ಣನ ಭಕ್ತರು ಭಾಗಿಯಾಗಿದ್ದರು. ಈ ಮೂಲಕ ಪರ್ಯಾಯೋತ್ಸವಕ್ಕೆ ಮತ್ತಷ್ಟು ರಂಗು ತಂದರು.

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ. ಉಡುಪಿ ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ. ಮೆರವಣಿಗೆ ಹಾಗೂ ಕಾರ್ಯಕ್ರಮವನ್ನು ನೋಡಿ ಮೈಸೂರು ದಸರಾ ವೈಭವ ನನಗೆ ನೆನಪಾಯಿತು. ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ. ದೇಶ ಸಾಂಸ್ಕೃತಿಕವಾಗಿ ವಿಶ್ವಗುರುವಾಗುವ ಪಥದತ್ತ ಸಾಗುತ್ತಿದೆ ಎಂದು ಉಡುಪಿ ಸಂಸ್ಕೃತಿಯನ್ನು ಬಣ್ಣಿಸಿದ್ದರು.

ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕೊಲ್ಲೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.