ETV Bharat / state

ರೆಶಾನ್ ಶೇಖ್ ಬಂಧನ.. ರಾಜ್ಯ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು: ಶಾಸಕ ರಘುಪತಿ ಭಟ್

author img

By

Published : Jan 6, 2023, 5:51 PM IST

ಕರಾವಳಿ ಭಾಗದ ಮೇಲೆ ಎನ್​​ಐಎ ಹೆಚ್ಚಿನ ನಿಗಾ ಇರಿಸಬೇಕು - ರಿಶಾನ್ ತಂದೆ ತಾಜುದ್ದೀನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್​​ನಲ್ಲಿ ಸಕ್ರಿಯ ಕಾರ್ಯಕರ್ತ - ಸಿದ್ದರಾಮಯ್ಯ, ಡಿಕೆಶಿ, ಯುಟಿ ಖಾದರ್ ಅವರ ಪರಮಾಪ್ತ - ರಾಜ್ಯ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು -ಶಾಸಕ ರಘುಪತಿ ಭಟ್ ಆಗ್ರಹ.

MLA Raghupathi Bhat
ಶಾಸಕ ರಘುಪತಿ ಭಟ್

ಶಿವಮೊಗ್ಗ ಸ್ಫೋಟ ಪ್ರಕರಣ: ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ

ಉಡುಪಿ: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಗ ರಿಶಾನ್ ಎಂಬಾತನನ್ನು ಎನ್​​ಐಎ(ರಾಷ್ಟ್ರೀಯ ತನಿಖಾ ದಳ) ಬಂಧಿಸಿದೆ. ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರ ಬರುತ್ತಿದೆ. ತನಿಖೆಯನ್ನು ಇನ್ನಷ್ಟು ತೀವ್ರ ಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಉಡುಪಿಯಲ್ಲಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಮಾಧ್ಯಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ​, ಮಂಗಳೂರು ಕುಕ್ಕರ್ ಬ್ಲಾಸ್ಟ್​​ ಪ್ರಕರಣದ ಮುಂದುವರೆದ ತನಿಖೆಯಲ್ಲಿ ಮಾಝ್ ಮುನೀರ್, ಶಾರೀಕ್ ರೂಂಮೇಟ್ ಆಗಿದ್ದ ಎನ್. ರೆಶಾನ್ ಶೇಖ್ ಎಂಬಾತನನ್ನು ಎನ್​​ಐಎ ಬಂಧಿಸಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯ ಮೀನ ಅನ್ಮೋಲ್ ಅಪಾರ್ಟ್ಮೆಂಟ್​​ನ ರೆಶಾನ್ ಮನೆಯಿಂದ ಎನ್​​ಐಎ ಅಧಿಕಾರಿಗಳು ಲ್ಯಾಪ್ ಟಾಪ್, ಮೊಬೈಲ್, ಹಾರ್ಡ್ ಡಿಸ್ಕ್ ಸೇರಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಮಂಗಳೂರಿನ ಪಿಎ ಕಾಲೇಜಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಮಾಡುತ್ತಿರುವ ಯುವಕನ ಬ್ಯಾಂಕ್ ಡೀಟೈಲ್ಸ್, ಪಾಸ್ ಪೋರ್ಟ್, ವಿಳಾಸಗಳ ದಾಖಲೆ ಪಡೆದ ಪೊಲೀಸರು ಪೋಷಕರ ಹೇಳಿಕೆಗಳನ್ನು ಪಡೆದು ದಾಖಲು ಮಾಡಿದ್ದಾರೆ. ರೆಶಾನ್ ಶೇಖ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮುಖಂಡ ತಾಜುದ್ದೀನ್ ಶೇಖ್ ಅವರ ಮಗ. ತಾಜುದ್ದೀನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್​​ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜತೆ ಉತ್ತಮ ಬಾಂಧವ್ಯ ಹೊಂದಿದ್ದು ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ತಾಜುದ್ದೀನ್ ಸಕ್ರಿಯರಾಗಿದ್ದಾರೆ. ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರಗೆ ಬರುತ್ತಿದೆ. ಹಾಗಾಗಿ ತನಿಖೆಯನ್ನು ಇನ್ನಷ್ಟು ತೀವ್ರ ಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದರು.

ರಾಜ್ಯ ಕಾಂಗ್ರೆಸ್ ಸ್ಪಷ್ಟನೆ ಕೊಡಬೇಕು: ಕರಾವಳಿಯಲ್ಲಿ ಇಂತಹ ನಿಗೂಢ ಚಟುವಟಿಕೆಗಳ ಬಗ್ಗೆ ತನಿಖೆ ಆಗಬೇಕು. ಹಿಜಾಬ್ ವಿವಾದ ಆದಾಗಲೇ ನಾನು ಆತಂಕ ವ್ಯಕ್ತಪಡಿಸಿದ್ದೆ. ಕರಾವಳಿ ಭಾಗದ ಮೇಲೆ ಎನ್​​ಐಎ ಹೆಚ್ಚಿನ ನಿಗಾ ಇರಿಸಬೇಕು. ರಿಶಾನ್ ತಂದೆ ತಾಜುದ್ದೀನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್​​ನಲ್ಲಿ ಸಕ್ರಿಯ ಕಾರ್ಯಕರ್ತ. ಸಿದ್ದರಾಮಯ್ಯ, ಡಿಕೆಶಿ, ಯುಟಿ ಖಾದರ್ ಪರಮಾಪ್ತ. ರಾಜ್ಯ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಕಾಂಗ್ರೆಸ್ ಪಕ್ಷ ಇದರ ಜವಾಬ್ದಾರಿಯನ್ನು ಹೊರಬೇಕು. ಕಾಂಗ್ರೆಸ್ ಪ್ರಮೋಷನ್ ಕೊಟ್ಟು ಬ್ಲಾಕ್ ಅಧ್ಯಕ್ಷನನ್ನಾಗಿ ಮಾಡುತ್ತಾ? ಎಂದು ಅವರು ಪ್ರಶ್ನಿಸಿದರು.

ಕಾರ್ಯದರ್ಶಿ ಸ್ಥಾನದಿಂದ ಉಚ್ಛಾಟನೆ ಮಾಡುತ್ತಾರಾ?: ಕಾಂಗ್ರೆಸ್ ನಾಯಕರ ಜತೆಗಿರುವ ಫೋಟೋವನ್ನು ಬಿಡುಗಡೆ ಮಾಡಿದ್ದೇನೆ. ರೆಶಾನ್ ಕುಟುಂಬದ ಬಗ್ಗೆ ಕೂಡಾ ತನಿಖೆ ಮಾಡಬೇಕು. ರಿಶಾನ್ ತಾಯಿ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕಿ. ಆಕೆಯ ಮೇಲೆ ಲಿಖಿತ ದೂರನ್ನು ಶಿಕ್ಷಣ ಸಚಿವ ನಾಗೇಶ್ ಅವರಿಗೆ ನೀಡಲಾಗಿದೆ. ಕಾಲೇಜು ವಿರುದ್ಧವಾಗಿ ಹೇಳಿಕೆ ಕೊಡುವ ಆಡಿಯೋಗಳನ್ನು ಸಚಿವರಿಗೆ ಕೊಡಲಾಗಿದೆ. ತಾಜುದ್ದೀನ್ ಆರ್ಥಿಕ ಪರಿಸ್ಥಿತಿ ಈ ಹಿಂದೆ ಹದಗೆಟ್ಟಿತ್ತು. ಏಕಾಏಕಿ ಇತ್ತೀಚೆಗೆ ಶ್ರೀಮಂತನಾದ ಬಗ್ಗೆ ಸ್ಥಳೀಯರು ಗುಮಾನಿ ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಶಿವಮೊಗ್ಗ ಸ್ಫೋಟ ಪ್ರಕರಣ: ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿರುವ ಎನ್​ಐಎ ತಂಡದ ಏಳು ಜನ ಅಧಿಕಾರಿಗಳು ಶಂಕಿತ ಉಗ್ರನ ಜೊತೆ ಸಂಪರ್ಕ ಹೊಂದಿದ್ದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಅಧಿಕಾರಿಗಳು ವಶಕ್ಕೆ ಪಡೆದ ವಿದ್ಯಾರ್ಥಿ ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದದಲ್ಲಿ ವ್ಯಾಸಂಗ ಮಾಡುತ್ತಿದ್ದು, ಉಡುಪಿ ಮೂಲದವರು ಎಂದು ತಿಳಿದುಬಂದಿದೆ.

ಈ ವಿದ್ಯಾರ್ಥಿ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಫೋಟಕ ಸ್ಫೋಟಿಸಿದ್ದ ಪ್ರಕರಣದಲ್ಲಿ ಬಂಧನವಾಗಿರುವ ಶಂಕಿತ ಉಗ್ರನ ಜತೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿದ್ದ ಎಂಬ ವಿಚಾರ ಗೊತ್ತಾಗಿದೆ. ಇದೇ ವಿಚಾರಕ್ಕಾಗಿ ಆ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಎಂಬಾತ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದೂ ಹೇಳಲಾಗುತ್ತಿದೆ.

ಶಿವಮೊಗ್ಗ ಪ್ರಕರಣದಲ್ಲಿ ಸೈಯದ್ ಯಾಸೀನ್, ಮಾಝ್ ಮುನೀರ್, ಶಾರೀಕ್ ಅಹಮ್ಮದ್ ಎಂಬವರನ್ನು ಬಂಧಿಸಲಾಗಿತ್ತು. ಯಾಸಿನ್ ಶಿವಮೊಗ್ಗದಲ್ಲಿ ಎಂಜಿನಿಯರಿಂಗ್ ಓದಿದ್ದರೆ, ಮತ್ತೋರ್ವ ಕೊಣಾಜೆಯ ನಡುಪದವು ಸಮೀಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್ ಓದುತ್ತಿದ್ದಾನೆ. ತೀರ್ಥಹಳ್ಳಿ ಮೂಲದ ಶಾರೀಕ್ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಶಿವಮೊಗ್ಗ ಸ್ಫೋಟ ಪ್ರಕರಣ: ಉಳ್ಳಾಲ ಇಂಜಿನಿಯರಿಂಗ್​ ಕಾಲೇಜ್​ ಮೇಲೆ ಎನ್ಐಎ ದಾಳಿ, ವಿದ್ಯಾರ್ಥಿ ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.