ದೆಹಲಿ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಗೆದ್ದ ಉಡುಪಿಯ ಕುವರಿ

author img

By

Published : Oct 5, 2021, 2:08 PM IST

Updated : Oct 5, 2021, 2:27 PM IST

udupi-athlete-wins-gold-in-delhi-athletic-federation-of-india-championship

23 ವರ್ಷದ ವಯೋಮಿತಿ ಒಳಗಿನ ದೆಹಲಿ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ಚಾಂಪಿಯನ್ ಶಿಪ್​​ನಲ್ಲಿ ಉಡುಪಿ ಕ್ರೀಡಾಪಟು ಚಿನ್ನ ಗೆದ್ದು ಸಾಧನೆ ಮಾಡಿದ್ದಾರೆ. ಜಾವಲಿನ್ ಥ್ರೋ ವಿಭಾಗದಲ್ಲಿ 46.52 ಮೀಟರ್ ದೂರ ಎಸೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಉಡುಪಿ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ಚಾಂಪಿಯನ್ ಶಿಪ್​​ನ ಜಾವಲಿನ್ ಥ್ರೋ ವಿಭಾಗದಲ್ಲಿ ಉಡುಪಿಯ ಕರೀಶ್ಮಾ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿಯಾಗಿರುವ ಕರೀಶ್ಮಾ, ರಾಯಚೂರಿನ ಎಲ್​ವಿಡಿ ಕಾಲೇಜಿನಲ್ಲಿ ಬಿಎಸ್​ಸಿ ಅಂತಿಮ ವರ್ಷದ ಪದವಿ ಓದುತ್ತಿದ್ದಾರೆ.

ದೆಹಲಿ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ಚಾಂಪಿಯನ್​ಶಿಪ್​ನಲ್ಲಿ ಚಿನ್ನ ಗೆದ್ದ ಉಡುಪಿಯ ಕುವರಿ

23 ವರ್ಷದ ವಯೋಮಿತಿ ಒಳಗಿನ ಮೊದಲ ಚಾಂಪಿಯನ್ ಶಿಪ್​​​​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕರೀಶ್ಮಾ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡಾಪಟು ಕರೀಶ್ಮಾ, ಸುದರ್ಶನ್ ಅನಿಲ್ ಮತ್ತು ಇಂದಿರಾ ದಂಪತಿಯ ಪುತ್ರಿ.

ವಿಶೇಷ ಅಂದರೆ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದ ನೀರಜ್ ಚೋಪ್ರಾ ಅವರ ಕೋಚ್​​ ಕಾಶಿನಾಥ್ ನಾಯಕ್ ಈಕೆಗೂ ಆನ್​ಲೈನ್ ಟ್ರೈನಿಂಗ್ ಕೊಡುತ್ತಿದ್ದಾರೆ. ದೆಹಲಿ ಚಾಂಪಿಯನ್ ಶಿಪ್​​ನಲ್ಲಿ ಕರೀಶ್ಮಾ ಸನಿಲ್ 46.52 ಮೀಟರ್ ದೂರ ಜಾವಲಿನ್ ಎಸೆದು ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: NEPಗೆ ಬೆಂಬಲ.. ಮಂಗಳೂರಿನ ಸರ್ಕಾರಿ ಕಚೇರಿ ಗೋಡೆಗಳ ಮೇಲೆ ಮೂಡಿವೆ ರಂಗಿನ ಚಿತ್ತಾರಗಳು

Last Updated :Oct 5, 2021, 2:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.