ETV Bharat / state

ಆಹಾರ ಅರಸಿ ನಾಡಿಗೆ ಬಂದು ಬಾವಿಗೆ ಬಿದ್ದ ಚಿರತೆ ರಕ್ಷಣೆ

author img

By

Published : Oct 17, 2022, 10:54 PM IST

ಹೊನ್ನಾವರ ತಾಲೂಕಿನ ಕೆರೆಕೋಣ ಗ್ರಾಮದಲ್ಲಿ ಆಹಾರ ಹುಡುಕಿ ನಾಡಿನತ್ತ ಹೆಜ್ಜೆ ಹಾಕಿದ್ದ ಚಿರತೆಯೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಪುನಃ ಕಾಡಿಗೆ ಬಿಟ್ಟಿದ್ದಾರೆ.

ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ
ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ

ಕಾರವಾರ: ಆಹಾರ ಹುಡುಕಿ ನಾಡಿನತ್ತ ಹೆಜ್ಜೆ ಹಾಕಿದ್ದ ಚಿರತೆಯೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹಿಡಿದು ಪುನಃ ಕಾಡಿಗೆ ಬಿಟ್ಟಿರುವ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣ ಗ್ರಾಮದಲ್ಲಿ ನಡೆದಿದೆ.

ಸಾಲ್ಕೋಡ್ ಗ್ರಾಮದ ಕೆರೆಕೋಣ ಸಮೀಪದ ಮನೆಯೊಂದರ ಬಾವಿಗೆ ಆಹಾರ ಅರಸಿ ಬಂದಿದ್ದ ಒಂದುವರೆ ವರ್ಷದ ಚಿರತೆಯು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು. ಬಾವಿಯಿಂದ ಮೇಲೆ ಬರಲು ಹರಸಾಹಸ ಪಡುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಆಹಾರ ಅರಸಿ ಬಂದು ಬಾವಿಗೆ ಬಿದ್ದ ಚಿರತೆ

ಕೂಡಲೇ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಸಾರ್ವಜನಿಕರ ಸಹಕಾರದ ಮೇರೆಗೆ ಏಣಿ ಹಾಗೂ ಬಲೆಯ ಮುಂತಾದ ಸಲಕರಣೆಯನ್ನು ಬಳಸಿ ಸುರಕ್ಷಿತವಾಗಿ ಮೇಲಕ್ಕೆತ್ತುವ ಮೂಲಕ ಕಾಡಿಗೆ ಬಿಟ್ಟಿದ್ದಾರೆ. ಆರ್​ಎಫ್​ಓ ವಿಕ್ರಂ ರೆಡ್ಡಿ ಸಲಹೆ ಮೇರೆಗೆ ಸಿಬ್ಬಂದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಓದಿ: ಚಾಮರಾಜನಗರ: ಹಸು ಮೇಯಿಸಲು ಹೋಗಿದ್ದ ರೈತನ ಕೊಂದ ಚಿರತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.