ಶಿರೂರು ಟೋಲ್‌ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್​; ನಾಲ್ವರು ದಾರುಣ ಸಾವು...ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

author img

By

Published : Jul 20, 2022, 6:57 PM IST

Updated : Jul 21, 2022, 5:53 PM IST

ನಾಲ್ವರು ದಾರುಣ ಸಾವು...ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆ್ಯಂಬುಲೆನ್ಸ್​ ವಾಹನವೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಶಿರೂರು ಟೋಲ್‌ ಗೇಟ್​​ನಲ್ಲಿ ಸಂಭವಿಸಿದೆ. ಭೀಕರ ಅಪಘಾತದ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​​ ಜಖಂ ಆಗಿದೆ.

ಭಟ್ಕಳ (ಉತ್ತರ ಕನ್ನಡ) : ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್​ ವಾಹನವೊಂದು ಟೋಲ್‌ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿರೂರು ಟೋಲ್‌ ಗೇಟ್​​ನಲ್ಲಿ ಸಂಭವಿಸಿದೆ.

ಶಿರೂರು ಟೋಲ್‌ ಪ್ಲಾಝಾ ಬಳಿ ಬರುತ್ತಿದ್ದಂತೆಯೇ ಟೋಲ್ ಗೇಟ್ ಸಿಬ್ಬಂದಿಯನ್ನು ತಪ್ಪಿಸಲು ಹೋಗಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್​ ಸಂಚಾರಕ್ಕೆ ನೆರವು ನೀಡಲು ಮುಂದಾಗಿದ್ದ ಟೋಲ್‌ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿರೂರು ಟೋಲ್‌ ಕಂಬಕ್ಕೆ ಡಿಕ್ಕಿಯಾದ ಆ್ಯಂಬುಲೆನ್ಸ್​

ಭೀಕರ ಅಪಘಾತದ ದೃಶ್ಯ ಇಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್​ ಜಖಂ ಆಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿದ್ದು ಬೈಂದೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Last Updated :Jul 21, 2022, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.