ETV Bharat / state

ಜಿ.ಪಂ ಅಧ್ಯಕ್ಷೆ ಸುಳ್ಳು ಜಾತಿ ಪ್ರಮಾಣಪತ್ರ ರದ್ದುಗೊಳಿಸುವಂತೆ ತಹಶೀಲ್ದಾರ್​ಗೆ ಆದೇಶ

author img

By

Published : Aug 23, 2019, 5:56 PM IST

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪ

ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನ ಅಲಂಕರಿಸಲಾಗಿದೆ ಎಂಬ ದೂರಿನ ವಿಚಾರಣೆಯನ್ನು ಭಟ್ಕಳ ಉಪವಿಭಾಗಾಧಿಕಾರಿ ನ್ಯಾಯಾಲಯ ನಡೆಸಿದೆ. ಬಳಿಕ ಅಧ್ಯಕ್ಷೆ ಜಯಶ್ರೀ ಮೊಗೇರ್ ನೀಡಿದ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವಂತೆ ಭಟ್ಕಳ ತಹಶಿಲ್ದಾರ್​ಗೆ ಆದೇಶಿಸಲಾಗಿದೆ.

ಕಾರವಾರ: ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್​ ಅಧ್ಯಕ್ಷ ಸ್ಥಾನ ಅಲಂಕರಿಸಲಾಗಿದೆ ಎಂಬ ದೂರಿನ ವಿಚಾರಣೆ ನಡೆಸಿದ ಭಟ್ಕಳ ಉಪವಿಭಾಗಾಧಿಕಾರಿ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಅಧ್ಯಕ್ಷೆ ಜಯಶ್ರೀ ಮೊಗೇರ್ ನೀಡಿದ ಅನುಸೂಚಿತ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವಂತೆ ಭಟ್ಕಳ ತಹಶಿಲ್ದಾರ್​ಗೆ ಆದೇಶಿಸಿದೆ.

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಆರೋಪ

ಭಟ್ಕಳದ ಬೆಳ್ನಿಯ ಜಯಶ್ರೀ ಮೊಗೇರ್ ತಾವು ಅನುಸೂಚಿತ ಮೊಗೇರ್ ಜಾತಿಗೆ ಸೇರಿದವರು ಎಂದು ಭಟ್ಕಳ ತಹಶಿಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದಿದ್ದರು.‌ ಅದರಂತೆ ಜಿಲ್ಲಾ ಪಂಚಾಯತ್​ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಬಳಿಕ ಉತ್ತರಕನ್ನಡ ಜಿಲ್ಲೆಯ ಜಿ. ಪಂ. ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿಗೆ ಮೀಸಲಾಗಿದ್ದರಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಆದರೆ ಜಯಶ್ರೀ ಈವರೆಗೆ ಸಲ್ಲಿಸಿರುವುದು ಸುಳ್ಳು ಪ್ರಮಾಣ ಪತ್ರ. ಅವರು ನೈಜ ಪರಿಶಿಷ್ಟ ಜಾತಿಗೆ ಸೇರಿಲ್ಲ. ಆದರೂ ಸುಳ್ಳು ಪ್ರಮಾಣಪತ್ರ ನೀಡಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದು, ಅವರ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ನಾರಾಯಣ ಶಿರೂರು ಎಂಬುವರು ದೂರು ದಾಖಲಿಸಿದ್ದರು.

ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಅಹಮದ್ ಮುಲ್ಲಾ, ಜಯಶ್ರೀ ಮೊಗೇರ ತಾವು ಅನುಸೂಚಿತ ಜಾತಿಗೆ ಸೇರಿದವರೆಂಬ ಬಗ್ಗೆ ಸಾಬೀತು ಪಡಿಸುವ ಬಗ್ಗೆ ದಾಖಲೆ ಅಥವಾ ಪುರಾವೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ವಿಫಲರಾಗಿದ್ದಾರೆ. ಮೊಗೇರ್ ಜಾತಿ ಹಿಂದುಳಿದ ವರ್ಗಕ್ಕೆ ಸೇರುವುದರಿಂದ ಜಯಶ್ರೀ ಮೊಗೇರ್ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸುವಂತೆ ತಹಶಿಲ್ದಾರ್​ಗೆ ಆದೇಶಿಸಿದ್ದಾರೆ.

ಇನ್ನು, ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜಯಶ್ರೀ ಮೊಗೇರ್, ನಮ್ಮ ಮೊಗೇರ್ ಸಮಾಜ ಅನುಸೂಚಿತ ಜಾತಿಗೆ ಸೇರುತ್ತದೆ ಎಂಬ ಬಗ್ಗೆ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಆದರೆ ಈ ನಡುವೆ ಭಟ್ಕಳ ಉಪವಿಭಾಗಾಧಿಕಾರಿಗಳು ನನ್ನ ಜಾತಿ ಪ್ರಮಾಣಪತ್ರ ರದ್ದುಪಡಿಸಲು ಆದೇಶಿದ್ದಾರಂತೆ. ಆದರೆ ಈ ಬಗ್ಗೆ ಯಾವುದೇ ಆದೇಶದ ಪ್ರತಿ ನನಗೆ ತಲುಪಿಲ್ಲ ಎಂದು ತಿಳಿಸಿದ್ದಾರೆ.

Intro:


Body:

ಕಾರವಾರ: ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಉತ್ತರಕನ್ನಡ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನ ಅಲಂಕರಿಸಲಾಗಿದೆ ಎಂಬ ದೂರಿನ ವಿಚಾರಣೆ ನಡೆಸಿದ ಭಟ್ಕಳ ಉಪವಿಭಾಗಾಧಿಕಾರಿ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಅಧ್ಯಕ್ಷೆ ಜಯಶ್ರೀ ಮೊಗೇರ್ ನೀಡಿದ ಅನುಸೂಚಿತ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ಭಟ್ಕಳ ತಹಶೀಲ್ದಾರರಿಗೆ ಆದೇಶಿಸಿದೆ.
ಭಟ್ಕಳದ ಬೆಳ್ನಿಯ ಜಯಶ್ರೀ ಮೊಗೇರ್ ತಾವು ಅನುಸೂಚಿತ ಮೊಗೇರ್ ಜಾತಿಗೆ ಸೇರಿದವರು ಎಂದು ಭಟ್ಕಳ ತಹಶಿಲ್ದಾರರಿಂದ ಪ್ರಮಾಣ ಪತ್ರವನ್ನು ಪಡೆದಿದ್ದರು.‌ ಅದರಂತೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಬಳಿಕ ಉತ್ತರಕನ್ನಡ ಜಿಲ್ಲೆಯ ಜಿಲ್ಲಾಪಂಚಾಯಿತಿ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿಗೆ ಮೀಸಲಾಗಿದ್ದರಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಆದರೆ ಜಯಶ್ರೀ ಮೊಗೇರ ಈವರೆಗೆ ಸಲ್ಲಿಸಿರುವುದು ಸುಳ್ಳು ಪ್ರಮಾಣ ಪತ್ರ.ಅವರು ನೈಜ ಪರಿಶಿಷ್ಟ ಜಾತಿಗೆ ಸೇರಿಲ್ಲ. ಆದರು ಸುಳ್ಳು ಪ್ರಮಾಣ ಪತ್ರ ನೀಡಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದು ಅವರ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ನಾರಾಯಣ ಶಿರೂರು ಎಂಬುವವರು ದೂರು ದಾಖಲಿಸಿದ್ದರು.
ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಅಹಮದ್ ಮುಲ್ಲಾ, ಜಯಶ್ರೀ ಮೊಗೇರ ತಾವು ಅನುಸೂಚಿತ ಜಾತಿಗೆ ಸೇರಿದವರೆಂಬ ಬಗ್ಗೆ ಸಾಬಿತು ಪಡೆಸುವ ಬಗ್ಗೆ ದಾಖಲೆ ಅಥವಾ ಪೂರಾವೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ವಿಫಲಾರಾಗಿದ್ದಾರೆ. ಮೊಗೇರ್ ಇದು ಹಿಂದುಳಿದ ಅ ವರ್ಗಕ್ಕೆ ಸೇರುವುದರಿಂದ ಜಯಶ್ರೀ ಮೊಗೇರ್ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಪಡಿಸುವಂತೆ ತಹಶೀಲ್ದಾರರಿಗೆ ಆದೇಶಿಸಿದ್ದಾರೆ.
ಇನ್ನು ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಜಯಶ್ರೀ ಮೊಗೇರ್, ನಮ್ಮ ಸಮಾಜ ಮೊಗೇರ್ ಜಾತಿ ಅನುಸೂಚಿತ ಜಾತಿಗೆ ಸೇರುತ್ತದೆ ಎಂಬ ಬಗ್ಗೆ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆ ಕೂಡ ನಡೆಯುತ್ತಿದೆ. ಆದರೆ ಈ ನಡುವೆ ಭಟ್ಕಳ ಉಪವಿಭಾಗಾಧಿಕಾರಿಗಳು ನನ್ನ ಜಾತಿ ಪ್ರಮಾಣ ಪತ್ರ ರದ್ದು ಪಡಿಸಲು ಆದೇಶಿದ್ದಾರಂತೆ. ಆದರೆ ಈ ಬಗ್ಗೆ ಯಾವುದೇ ಆದೇಶದ ಪ್ರತಿ ನನಗೆ ತಲುಪಿಲ್ಲ ಎಂದರು.
ನಾನು ಎಂದೂ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿಲ್ಲ. ಇದೇ ಪ್ರಮಾಣ ಪತ್ರದಿಂದ ಮೂರು ಭಾರಿ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದೇನೆ. ಅಲ್ಲದೆ ನನಗೆ ಜಿ.ಪಂ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವಾಗ ಚುನಾವಣಾಧಿಕಾರಿಗಳು ದೃಡಿಕರಿಸಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಇನ್ನು ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಜಗದೀಶ ಮಾತನಾಡಿ, ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಬೆರೆಯವರಿಗೆ ಸಿಗಬೇಕಾದ ಅಧ್ಯಕ್ಷ ಸ್ಥಾನವನ್ನು ಜಯಶ್ರಿ ಮೋಗೆರ ಅವರು ಅಲಂಕರಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯೆ ಎಂಬುವವರಿಗೆ ಅನ್ಯಾಯವಾಗಿದೆ. ಕೂಡಲೇ ಜಯಶ್ರೀ ಮೊಗೇರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಜತೆಗೆ ಸುಳ್ಳು ಪ್ರಮಾಣಪತ್ರ ನೀಡಿದ ಅಧಿಕಾರಿಗಳಿಗೆ ದಂಡನೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಬೈಟ್ ೧ ಜಯಶ್ರೀ ಮೊಗೇರ್ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ

ಬೈಟ್ ೨ ಜಗದೀಶ, ಜಿಲ್ಲಾ ಪಂಚಾಯತಿ, ಸದಸ್ಯ




Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.