ETV Bharat / state

ಉ.ಕ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹರಸಾಹಸ

author img

By

Published : Jun 5, 2021, 10:58 AM IST

Updated : Jun 5, 2021, 12:59 PM IST

Fire incident
ಉ.ಕ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ

ಶಾರ್ಟ್ ಸರ್ಕ್ಯೂಟ್​​​ನಿಂದಾಗಿ ಕಾರವಾರದ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಅಭಿಲೇಖಾಲಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿಯ ಅಭಿಲೇಖಾಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೂರು ಮಹಡಿಯ ಕಟ್ಟಡ ಹೊತ್ತಿ ಉರಿದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಕಾರವಾರದ ಜಿಲ್ಲಾ ಪಂಚಾಯಿತಿ ಹಿಂಭಾಗದಲ್ಲಿರುವ ಅಭಿಲೇಖಾಲಯದಲ್ಲಿ ಶಾರ್ಟ್ ಸರ್ಕ್ಯೂಟ್​​​ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಬೆಂಕಿ ಕಟ್ಟಡದ ಮೂರು ಮಹಡಿಗೂ ಆವರಿಸಿದೆ. ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿಯ ದಾಖಲಾತಿಗಳನ್ನು ಇಡಲಾಗಿದ್ದು, ಕೆಲವು ದಾಖಲಾತಿಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಉ.ಕ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಅಗ್ನಿ ಅವಘಡ..

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ಇನ್ನೂ ಕೂಡ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಿಇಒ ಪ್ರಿಯಾಂಗ್​ ಎಂ. ಹಾಜರಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಓದಿ: ಹತ್ತು ದಿನಗಳ ಅಂತರದಲ್ಲಿ ಅಪ್ಪ, ಮಗ, ಮಗಳು ಸಾವು!

Last Updated :Jun 5, 2021, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.