ETV Bharat / state

ಇಲ್ಲಿನ ಅಭಿವೃದ್ಧಿ ಲಾಭವನ್ನು ದೇಶದ್ರೋಹಿಗಳು ಪಡೆಯುತ್ತಿದ್ದಾರೆ: ಸಂಸದ ಹೆಗಡೆ ಆಕ್ರೋಶ

author img

By

Published : Nov 9, 2021, 5:08 PM IST

ಇಲ್ಲಿನ ಅಭಿವೃದ್ಧಿಯ ಲಾಭವನ್ನು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ, ಮಂಗಳೂರು ಸಂಪೂರ್ಣ ನಮ್ಮ ಕೈ ತಪ್ಪಿ ಹೋಗುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ಹೊರಹಾಕಿದ್ದಾರೆ.

MP anant kumar hegade statement in sirsi
ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ

ಶಿರಸಿ: ಇಲ್ಲಿನ ಅಭಿವೃದ್ಧಿಯ ಲಾಭವನ್ನು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ, ಮಂಗಳೂರು ಸಂಪೂರ್ಣ ನಮ್ಮ ಕೈತಪ್ಪಿ ಹೋಗುತ್ತಿದೆ. ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಹೇಳಿಕೆ ನೀಡಿದ ಅನಂತಕುಮಾರ್ ಹೆಗಡೆ, ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿಗರಿಗೆ ತಲೆನೋವಾಗಿದ್ದು ಮಂಗಳೂರಿನ ಮೂಲ ನಿವಾಸಿಗಳಲ್ಲ, ಕೇರಳದವರು ಎಂದರು. ನಮ್ಮ ಊರಿನ ಅಭಿವೃದ್ಧಿ ಲಾಭವನ್ನು ನಾವೇ ಪಡೆದುಕೊಳ್ಳಬೇಕು ಎಂದರು.

ಮಂಗಳೂರಿನ ಅಭಿವೃದ್ಧಿ ಲಾಭವನ್ನು ಕೇರಳದವರು ಪಡೆದುಕೊಳ್ಳುತಿದ್ದಾರೆ ನಾವು ಬೇರೆಡೆ ಹೋಗಿ ಅಲ್ಪ ಸಂಬಳಕ್ಕೆ ಚಾಕರಿ ಮಾಡುತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಪರಿಷತ್ ಚುನಾವಣೆ ಗಂಭೀರವಾಗಿ ಪರಿಗಣಿಸಿದ್ದೇವೆ, ಗೆಲ್ಲುವ ನಿರ್ಣಯವಾಗಿದೆ: ಕ್ಯಾ.ಗಣೇಶ್ ಕಾರ್ಣಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.