ETV Bharat / state

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್

author img

By

Published : Aug 9, 2022, 4:12 PM IST

Again hill collapse in Anashi Ghat
ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ

ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ ಘಟ್ಟದಲ್ಲಿ ಭಾೀರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಇದರ ಪರಿಣಾಮ ಕಾರವಾರದ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಕಳೆದ ನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿತವಾಗಿದೆ. ಕಳೆದ ತಿಂಗಳು ಗುಡ್ಡ ಕುಸಿತವಾಗಿದ್ದರಿಂದ ವಾರಕ್ಕೂ ಹೆಚ್ಚು ಕಾಲ ಈ ರಾಜ್ಯ ಹೆದ್ದಾರಿ ಬಂದ್​ ಮಾಡಲಾಗಿತ್ತು.

ಬಳಿಕ ಹಗಲಿನ ವೇಳೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದ್ದು, ಜೋಯಿಡಾ, ದಾಂಡೇಲಿ ಹಾಗೂ ಕಾರವಾರಕ್ಕೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ

ತಕ್ಷಣ ಕಾರ್ಯ ಪ್ರವೃತ್ತವಾದ ಸ್ಥಳೀಯ ಆಡಳಿತ ಜೆಸಿಬಿ ಮೂಲಕ ಮಣ್ಣನ್ನು ತೆರವು ಮಾಡುತ್ತಿದೆ. ಕಂದಾಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಣಶಿ ಘಟ್ಟದಲ್ಲಿ ಮತ್ತೆ ಕುಸಿದ ಭೂಮಿ: ಎಚ್ಚರಿಕೆ ಬೆನ್ನಲ್ಲೇ ಶುರುವಾದ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.