ETV Bharat / state

ನಿಗಮ ಮಂಡಳಿ ನೇಮಕಾತಿ ರದ್ದು: ಕಾಂಗ್ರೆಸ್ ಸೇರಲು ದಾರಿ ಸುಗಮ ಎಂದ ವಿ ಎಸ್ ಪಾಟೀಲ್

author img

By

Published : Aug 24, 2022, 8:11 PM IST

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿದ್ದ ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ ಎಸ್ ಪಾಟೀಲ್ ನೇಮಕಾತಿಯನ್ನು ಸರ್ಕಾರ ರದ್ದುಪಡಿಸಿದೆ.

ವಿ ಎಸ್ ಪಾಟೀಲ್
ವಿ ಎಸ್ ಪಾಟೀಲ್

ಶಿರಸಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದ ನಾಮನಿರ್ದೇಶನದಿಂದ ಯಲ್ಲಾಪುರದ ಮಾಜಿ ಶಾಸಕ ವಿ ಎಸ್​​ ಪಾಟೀಲ್ ಅವರ ನೇಮಕಾತಿಯನ್ನು ರದ್ದುಪಡಿಸಲಾಗಿದೆ. ಯಾವುದೇ ಕಾರಣ ಉಲ್ಲೇಖಿಸದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಟೀಲ್ ನಾಮನಿರ್ದೇಶ ರದ್ದುಪಡಿಸಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ ಎಸ್ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ
ಸರ್ಕಾರದ ಆದೇಶ ಪ್ರತಿ

ಕೆಲ ದಿನಗಳ ಹಿಂದೆ ಪಾಟೀಲ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ವರಿಷ್ಠ ಡಿಕೆಶಿ ಅವರನ್ನೂ ಸಹ ಪಾಟೀಲ್ ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣೀಕರ್ತರಾದ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ತಮ್ಮ ಸ್ಥಾನ ಬಿಟ್ಟುಕೊಟ್ಟಿರುವ ಕಾರಣ, ನೀಡಲಾಗಿದ್ದ ನಿಗಮ ಮಂಡಳಿಯನ್ನು ವಾಪಸ್ ಪಡೆಯಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನನ್ನ ಮಗನಿಗೆ ಸಾಲ ಕೊಡಬೇಡಿ, ಆತ ದುಶ್ಚಟಗಳಿಗೆ ಬಲಿಯಾಗಿದ್ದಾನೆ : ವಿ.ಎಸ್ ಪಾಟೀಲ್ ಪತ್ರಿಕಾ ಪ್ರಕಟಣೆ

ಈ ಬಗ್ಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲ್, "ಕಾಂಗ್ರೆಸ್ ಸೇರಲು ಈಗ ದಾರಿ ಸುಗಮವಾಗಿದೆ" ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.