ಹನುಮ ಮಾಲೆ ಧರಿಸಿ ಅಂಜನಾದ್ರಿ ಬೆಟ್ಟಕ್ಕೆ ಹೊರಟ ಮುಸ್ಲಿಂ ಮಾಲಾಧಾರಿ..

author img

By

Published : Dec 2, 2022, 8:28 PM IST

Kn_vjp

ವಿಜಯಪುರದ ಮುಸ್ಲಿಂ ವ್ಯಕ್ತಿಯೊಬ್ಬರು ಹುನುಮಂತನ ಮಾಲೆ ಧರಿಸುವ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ.

ವಿಜಯಪುರ: ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ಹನುಮಂತನ ಮಾಲಾ ಧರಿಸಿ ಹನುಮ ಜನ್ಮಭೂಮಿಯಾದ ಅಂಜನಾದ್ರಿ ಬೆಟ್ಟಕ್ಕೆ ಹೊರಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಬಸವೇಶ್ವರ ಹುಟ್ಟಿದ ನಾಡು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದ ಜಾಫರ್ ಬೆಣ್ಣೆ ಎಂಬವವರು ಹನುಮ ಮಾಲಾ ಧಾರಣೆ ಮಾಡಿದ್ದಾರೆ. ಹಣೆಗೆ ಗಂಧ, ತಿಲಕ ಇರಿಸಿ, ಕೇಸರಿ ವಸ್ತ್ರ ಧರಿಸಿ, ಕೊರಳಲ್ಲಿ ಹನುಮನ ಮಾಲಾ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್, ಜಾತಿಗಿಂತ ಭಾವೈಕ್ಯತೆ ದೊಡ್ಡದು ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಹೊರಟ ಮುಸ್ಲಿಂ ಮಾಲಾಧಾರಿ

ಹನುಮ ಮಾಲೆ ಧರಿಸಿರುವ ಅವರು ಅಂಜನಾದ್ರಿ ಬೆಟ್ಟಕ್ಕೆ ತೆರಳಿ ಅಲ್ಲಿ ಹನುಮಂತನಿಗೆ ಪೂಜೆ ಸಲ್ಲಿಸಿ ನಂತರ ಮಾಲಾಧಾರಣೆ ವ್ರತ ಮುಕ್ತಾಯ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಹಣತೆ ಹಚ್ಚಿದ ಮುಸ್ಲಿಂ ಬಾಂಧವರು: ಕುಷ್ಟಗಿಯಲ್ಲಿ ಭಾವೈಕ್ಯತೆ ಮೆರೆದ ಕುಟುಂಬ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.