ETV Bharat / state

ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಸೆರೆ

author img

By

Published : Dec 16, 2020, 7:20 PM IST

ತಾಳಿಕೋಟಿ ತಾಲೂಕು ನಡಹಳ್ಳಿ ಗ್ರಾಮದಲ್ಲಿ ಬಾಲಕಿಯೊಬ್ಬಳ ಮೇಲೆ ರುದ್ರಗೌಡ ಎಂಬಾತ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ತಾಳಿಕೋಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

Attempted rape on a minor dementia girl
ಆರೋಪಿ ರುದ್ರಗೌಡ ಬಿರಾದಾರ

ಮುದ್ದೇಬಿಹಾಳ: 16 ವರ್ಷದ ಅಪ್ರಾಪ್ತ ಅಂಗವಿಕಲ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ತಾಳಿಕೋಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿ ರುದ್ರಗೌಡ ಬಿರಾದಾರ ಗ್ರಾಮಸ್ಥರ ಕೈಗೆ ಸಿಕ್ಕಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಳಿಕೋಟಿ ತಾಲೂಕು ನಡಹಳ್ಳಿ ಗ್ರಾಮದಲ್ಲಿ ಬಾಲಕಿ ಮೇಲೆ ರುದ್ರಗೌಡ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ. ಬಾಲಕಿ ಕಿರುಚಿಕೊಂಡಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ತಾಳಿಕೋಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಆದರೆ, ಹೆಚ್ಚುವರಿ ಪಿಎಸ್​ಐ ಗಂಗೂಬಾಯಿ ಬಿರಾದಾರ ಪ್ರಕರಣ ದಾಖಲಿಸಿಕೊಳ್ಳದೇ ರಾಜಿ ಸಂಧಾನ ಮಾಡಿ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ದೂರು ದಾಖಲಾಗದೇ ಇರುವಾಗ ತಾಲೂಕಿನ ವಿಕಲಚೇತನರು ಪ್ರತಿಭಟಿಸಿ, ದೂರು ದಾಖಲಾಗುವಂತೆ ಮಾಡಿದ್ದಾರೆ.

ಏತನ್ಮಧ್ಯ ಘಟನೆಯ ಕುರಿತು ಅಂಗವಿಕಲರು ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ವಿ.ಜಿ.ಉಪಾಧ್ಯೆ ಅವರ ಗಮನಕ್ಕೆ ತಂದಿದ್ದು, ಮಂಗಳವಾರ ಸಂಜೆ ಪೊಲೀಸ್ ಠಾಣೆಗೆ ಆಗಮಿಸಿ ಕೇಸು ದಾಖಲಿಸಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. '

ಇದನ್ನೂ ಓದಿ : ಕಾಲೇಜು ಶುಲ್ಕ ಕಟ್ಟಲು ಬಂದ ಯುವತಿ ಮೇಲೆ ಅತ್ಯಾಚಾರ: ಕೊಲೆ

ಇಷ್ಟಾದರೂ ಕರ್ತವ್ಯದ ಮೇಲಿದ್ದ ಮಹಿಳಾ ಪಿಎಸ್ಐ ದೂರು ದಾಖಲಿಸಿಕೊಳ್ಳದೇ ಇದ್ದಾಗ ಅವರ ವಿರುದ್ಧ ವಿಕಲಚೇತನರು ತಮ್ಮ ಸಂಘಟನೆ ಪದಾಧಿಕಾರಿಗಳು ಸೇರಿ ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ. ಈ ಹಂತದಲ್ಲಿ ಪರಿಸ್ಥಿತಿ ಕೈಮೀರುವುದನ್ನು ಅರಿತು, ಎಚ್ಚೆತ್ತ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ ಅವರು, ಸದ್ಯಕ್ಕೆ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.