ಕರ್ನಾಟಕ U19 ಕ್ರಿಕೆಟ್ ತಂಡಕ್ಕೆ ಗುಮ್ಮಟನಗರಿ ಯುವತಿ ಆಯ್ಕೆ

author img

By

Published : Sep 24, 2022, 8:09 PM IST

Bijapur girl selected Karnataka u19 cricket team

2019ರಲ್ಲಿ 16 ವರ್ಷದೊಳಗಿನ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣ 2021ರಲ್ಲಿ 19 ವರ್ಷದೊಳಗಿನ ಏಕದಿನ ತಂಡಕ್ಕೂ ಆಯ್ಕೆಯಾಗಿದ್ದರು.

ವಿಜಯಪುರ: ನಗರದ ಬಿಎಲ್​ಡಿಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಬಿಕಾಂ ಮೊದಲ ವರ್ಷದ ವಿದ್ಯಾರ್ಥಿನಿ ಅನ್ನಪೂರ್ಣ ಜಿ ಭೋಸಲೆ 19 ವರ್ಷದೊಳಗಿನ ಕರ್ನಾಟಕ ಮಹಿಳಾ ಟಿ20 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 15 ಜನ ಆಟಗಾರರ ಪಟ್ಟಿಯನ್ನು ಇಂದು ಪ್ರಕಟಿಸಿದ್ದು, ಅನ್ನಪೂರ್ಣ ಜಿ. ಭೋಸಲೆ ವಿಕೆಟ್ ಕೀಪರ್ ಕಂ ಬ್ಯಾಟ್ಸ್​ಮನ್ ಆಗಿ ಆಯ್ಕೆಯಾಗಿದ್ದಾರೆ.

ಹೈದರಾಬಾದ್​ನಲ್ಲಿ ಅಕ್ಟೋಬರ್ 1 ರಿಂದ 8ರ ವರೆಗೆ ಮಹಿಳೆಯರ ಟಿ-20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಆ ಟೂರ್ನಮೆಂಟ್​ನಲ್ಲಿ ಇವರು ಭಾಗವಹಿಸಲಿದ್ದಾರೆ. 2019ರಲ್ಲಿ 16 ವರ್ಷದೊಳಗಿನ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣ 2021ರಲ್ಲಿ 19 ವರ್ಷದೊಳಗಿನ ಏಕದಿನ ತಂಡಕ್ಕೂ ಆಯ್ಕೆಯಾಗಿದ್ದರು. ಈಗ 19 ವರ್ಷದೊಳಗಿನ ಮಹಿಳಾ ಟಿ-20 ತಂಡಕ್ಕೆ ಆಯ್ಕೆಯಾಗಿದ್ದಾರೆ. 2020ರಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಆಯ್ಕೆ ನಡೆದಿರಲಿಲ್ಲ.

ಬಿಎಲ್​ಡಿಇ ಸಂಸ್ಥೆಯ ಅಧ್ಯಕ್ಷ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಅನ್ನಪೂರ್ಣ ಭೋಸಲೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಇನ್ನೂ ಹೆಚ್ಚಿನ ಸಾಧನೆ ಮಾಡಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮುದ್ದೇಬಿಹಾಳ ಯುವತಿ ಸಾಧನೆ.. ತಹಶೀಲ್ದಾರ್ ಹುದ್ದೆಗೆ ಆಯ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.