ETV Bharat / state

ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಓರ್ವ ಸಾವು, ಮತ್ತಿಬ್ಬರಿಗೆ ಗಾಯ

author img

By

Published : Dec 6, 2020, 7:56 PM IST

ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಸಿಂದಗಿ-ವಿಜಯಪುರ ರಸ್ತೆಯಲ್ಲಿ ನಡೆದಿದೆ. ಚಿಕ್ಕಸಿಂದಗಿಯ ನಿವಾಸಿ ಶಿವಾನಂದ ಪರಶುರಾಮ ಯಾಳವಾರ ಮೃತ ಯುವಕ.

Bike collision to the divider
ಶಿವಾನಂದ ಪರಶುರಾಮ ಯಾಳವಾರ ಮೃತ ಯುವಕ

ವಿಜಯಪುರ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಸಿಂದಗಿ-ವಿಜಯಪುರ ರಸ್ತೆಯಲ್ಲಿ ಈ ಘಟನೆ ನಡೆದಿದೆ.

Bike collision to the divider
ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ..

ಚಿಕ್ಕಸಿಂದಗಿಯ ನಿವಾಸಿ ಶಿವಾನಂದ ಪರಶುರಾಮ ಯಾಳವಾರ (18) ಮೃತ ಯುವಕ. ಬೈಕ್​ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ಸವಾರನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗ್ತಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.