ETV Bharat / state

ಸಿಂದಗಿ: ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವು

author img

By

Published : Oct 4, 2020, 7:27 AM IST

ವಿಜಯಪುರ ಜಿಲ್ಲೆಯ ಸಿಂದಗಿ ಬಳಿ ಬಸ್​ ಮತ್ತು ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್​ ಸವಾರ ಮೃತಪಟ್ಟಿದ್ದಾನೆ.

dsd
ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ನಿತೀನ್​ ಪಾಂಡ್ರೆ (26) ಮೃತ ವ್ಯಕ್ತಿ. ಸಿಂದಗಿ ಆಲಮೇಲ ರಸ್ತೆಯಲ್ಲಿ ಸಾರಿಗೆ ಸಂಸ್ಥೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.