ETV Bharat / state

ವಿಜಯಪುರ ಜಿಲ್ಲೆಯಲ್ಲಿಂದು 141 ಕೋವಿಡ್​ ಕೇಸ್​.. ವಿದ್ಯಾರ್ಥಿಗಳಲ್ಲೇ ಹೆಚ್ಚಿದ ಕೊರೊನಾ ಸೋಂಕು

author img

By

Published : Jan 24, 2022, 9:33 PM IST

ಜಿಲ್ಲೆಯಲ್ಲಿಂದು 141 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 1,569ಕ್ಕೆ ಏರಿಕೆಯಾಗಿದ್ದು, 49 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚಿದ ಕೊರೊನಾ
ವಿಜಯಪುರ ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚಿದ ಕೊರೊನಾ

ವಿಜಯಪುರ : ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದು, ಮಕ್ಕಳ ಸುರಕ್ಷತೆಗಾಗಿ ಇಲ್ಲಿಯವರೆಗೆ ಶಾಲೆಯಲ್ಲಿ ಐದಕ್ಕಿಂತ ಹೆಚ್ಚು ಸೋಂಕಿತರು ಇರುವ 12 ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದರು.

ಜನವರಿ 1ರಿಂದ 24ರವರೆಗೆ ಮುದ್ದೇಬಿಹಾಳ 2, ಸಿಂದಗಿ 2, ಇಂಡಿ 2, ಬಸವನ ಬಾಗೇವಾಡಿ 2, ವಿಜಯಪುರ 2 ಹಾಗೂ ಬಬಲೇಶ್ವರ, ಕೊಲ್ಹಾರ್ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಈವರೆಗೆ 117 ಮಕ್ಕಳು ಹಾಗೂ 6 ಜನ ಶಿಕ್ಷಕರು ಸೇರಿ ಒಟ್ಟು 123 ಜನ ಸೋಂಕಿನಿಂದ ಬಳಲುತ್ತಿದ್ದಾರೆ. ಕೆಲವು ವಿದ್ಯಾರ್ಥಿ, ಶಿಕ್ಷಕರ ಹೋಂ ಐಸೋಲೇಷನ್​​ ಅವಧಿ ಮುಗಿದಿದ್ದರು ಸಹ ಶಾಲೆ ಪುನಾರಂಭಗೊಳ್ಳದ ಕಾರಣ ವಿದ್ಯಾರ್ಥಿಗಳು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇಂದು ಮತ್ತೆ 141ಜನರಿಗೆ ಕೊರೊನಾ : ಜಿಲ್ಲೆಯಲ್ಲಿಂದು 141 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 1,569ಕ್ಕೆ ಏರಿಕೆಯಾಗಿದೆ. 49 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋಂ ಐಸೋಲೇಷನ್​​ನಲ್ಲಿ 1,520 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 139 ಜನ ಬಿಡುಗಡೆಯಾಗಿದ್ದರೆ, ಮತ್ತೆ 942 ಜನರ ಗಂಟಲು ದ್ರವ ಸಂಗ್ರಹಿಲಾಗಿದೆ. 739 ಜನರ ವರದಿಗೆ ಕಾಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್​​ ಕುಮಾರ್​​ ತಿಳಿಸಿದ್ದಾರೆ.

31 ಪೊಲೀಸರಿಗೆ ಪಾಸಿಟಿವ್: ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳಿಗೂ ಕೋವಿಡ್​​ ಸೋಂಕು ತಗುಲಿದೆ. ಜಿಲ್ಲಾ ಪೊಲೀಸ್ ಇಲಾಖೆಯ 31 ಸಿಬ್ಬಂದಿಗೆ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಆದರೆ, ಸಿಬ್ಬಂದಿಗೆ ವೈರಸ್​ನಿಂದಾಗಿ ಹೆಚ್ಚಿನ ಸಮಸ್ಯೆ ಆಗಿಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ. ಅಲ್ಲದೇ, ಪೊಲೀಸ್ ಇಲಾಖೆಯಿಂದ ಮಾಸ್ಕ್, ಸ್ಯಾನಿಟೈಸರ್ ಹಂಚಿಕೆ ಮಾಡಲಾಗಿದೆ. ಅದಕ್ಕಾಗಿ ಕೋವಿಡ್ ಸೋಂಕಿಗೆ ಒಳಗಾಗಿರುವ ಸಿಬ್ಬಂದಿ ಭಯ ಪಡಬಾರದು. ಪೊಲೀಸ್ ಇಲಾಖೆ ನಿಮ್ಮೊಂದಿಗೆ ಇದೆ ಎಂದು ಅಭಯ ನೀಡಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.