ETV Bharat / state

ವಿಜಯನಗರ ಗ್ರಾಮ ಪಂಚಾಯಿತಿ ನೇಮಕಾತಿ: 22 ಹುದ್ದೆಗೆ ಅರ್ಜಿ ಆಹ್ವಾನ

author img

By ETV Bharat Karnataka Team

Published : Dec 21, 2023, 12:57 PM IST

22 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

library supervisor recruitment in vijayapur Gram panchayat
library supervisor recruitment in vijayapur Gram panchayat

ಬೆಂಗಳೂರು: ವಿಜಯನಗರ ಜಿಲ್ಲಾ ಪಂಚಾಯಿತಿಯಲ್ಲಿ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆ ಪಂಚಾಯಿತಿ ವ್ಯಾಪ್ತಿಯ 22 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ವಿಜಯನಗರ ಜಿಲ್ಲಾ ಪಂಚಾಯತ್​ನಲ್ಲಿ ಖಾಲಿ ಇರುವ ಹುದ್ದೆ

  • ಹರಪನಹಳ್ಳಿ 4
  • ಕೂಡ್ಲಿಗೆ 6
  • ಹಗರಿ ಬೊಮ್ಮನಹಳ್ಳಿ 6
  • ಹಡಗಲಿ 3
  • ಕೊಟ್ಟೂರು 3

ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ. ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.

ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಬಳಿಕ ಅಭ್ಯರ್ಥಿಗಳ ಆಯ್ಕೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಜಿಲ್ಲಾಡಳಿತದ ವೆಬ್​ಸೈಟ್​ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಬೇಕು. ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಈ ಅರ್ಜಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅವಧಿಗೆ ಮುನ್ನ ಸಲ್ಲಿಸಬೇಕಿದೆ.

ಅರ್ಜಿ ಸಲ್ಲಿಕೆ ವಿಳಾಸ: ಸದಸ್ಯ ಕಾರ್ಯದರ್ಶಿ, ಆಯ್ಕೆ ಸಮಿತಿ ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯಿತಿ, ವಿಜಯನಗರ, ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಟಿಬಿ ಡ್ಯಾಂ ರಸ್ತೆ, ಹೊಸಪೇಟೆ -583225

ಈ ಹುದ್ದೆಗೆ ಡಿಸೆಂಬರ್​ 18 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜನವರಿಗೆ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾಡಳಿತದ ಅಧಿಕೃತ ಜಾಲತಾಣವಾಗಿರುವ vijayanagara.nic.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ, ಬಳ್ಳಾರಿ ಕೋರ್ಟ್​​ಗಳಲ್ಲಿ ಟೈಪಿಸ್ಟ್​, ಜವಾನ ಹುದ್ದೆ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.