ETV Bharat / state

ರಾಷ್ಟ್ರೀಯ ಮತದಾರರ ದಿನ:  ಸಕಲ ಸಿದ್ದತೆ ನಡೆಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

author img

By

Published : Jan 15, 2020, 8:22 AM IST

Kn_Vjp_03_DC_meeting _AV_7202140
ಜ. 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ, ಸಕಲ ಸಿದ್ದತೆ ನಡೆಸುವಂತೆ ಆಧಿಕಾರಿಗಳಿಗೆ ಸೂಚಿಸಿದ: ಡಿಸಿ, ವೈ.ಎಸ್ ಪಾಟೀಲ

ಜಿಲ್ಲಾಡಳಿತದಿಂದ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್​​ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ: ಜಿಲ್ಲಾಡಳಿತದಿಂದ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್​​ ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆ ಆಯೋಗದ ನಿರ್ದೇಶನದಂತೆ ಇದೇ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನ ಶಿಸ್ತುಬದ್ದವಾಗಿ ಆಚರಿಸಬೇಕು. ಅಂದು ಬೆಳಗ್ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಜಾಥಾ ನಗರದ ಮಹಾತ್ಮಾ ಗಾಂಧೀಜಿ ವೃತ್ತದಿಂದ ಆರಂಭಿಸಿ ಕಂದಗಲ ಹನುಮಂತರಾಯ ರಂಗಮಂದಿರದ ವರೆಗೆ ಮತದಾನದ ಮಹತ್ವ ಕುರಿತ ಅರಿವು ಮೂಡಿಸುವಂತೆ ಸಲಹೆ ನೀಡಿದರು. ನಂತರ ಬೆಳಗ್ಗೆ 11 ಗಂಟೆಗೆ ರಂಗಮಂದಿರದಲ್ಲಿ ಶಿಸ್ತುಬದ್ಧವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಸಮಾರಂಭ ಆಯೋಜಿಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸುವ ಜೊತೆಗೆ ನುರಿತ ಉಪನ್ಯಾಸಕರನ್ನು ಆಹ್ವಾನಿಸಬೇಕು. ಅಂದು ನೂತನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡ ಮತದಾರರು ಹಾಗೂ ವಿಕಲಚೇತನ ನೂತನ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ ಹಾಗೂ ಸನ್ಮಾನಿಸುವಂತೆ ಸೂಚನೆ ನೀಡಿದರು.

Intro:ವಿಜಯಪುರ Body:ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಜ. 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿಡಿಯೋ ಸಂವಾದ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಚುಣಾವಣಾ ಆಯೋಗದ ನಿರ್ದೇಶನದಂತೆ ಇದೇ ಜ. 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಶಿಸ್ತುಬದ್ದವಾಗಿ ಆಚರಿಸಬೇಕು. ಅಂದು ಬೆಳಿಗ್ಗೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಜಾಥಾವನ್ನು ನಗರದ ಮಹಾತ್ಮಾ ಗಾಂಧಿಜೀ ವೃತ್ತದಿಂದ ಆರಂಭಿಸಿ ಕಂದಗಲ ಹನುಮಂತರಾಯ ರಂಗಮಂದಿರದ ವರೆಗೆ ಮತದಾನದ ಮಹತ್ವ ಕುರಿತ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ನಂತರ ಬೆಳಿಗ್ಗೆ 11 ಗಂಟೆಗೆ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಿಸ್ತುಬದ್ಧವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಸಮಾರಂಭ ಆಯೋಜಿಸಬೇಕು. ಅತಿಥಿ ಗಣ್ಯರನ್ನು ಆಹ್ವಾನಿಸುವ ಜೊತೆಗೆ ನುರಿತ ಉಪನ್ಯಾಸಕರನ್ನು ಆಹ್ವಾನಿಸಬೇಕು. ಅಂದು ನೂರು ವಯೋಮಾನದ, ನೂತನ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡ ಮತದಾರರು ಹಾಗೂ ವಿಕಲಚೇತನ ನೂತನ ಮತದಾರರಿಗೆ ಎಪಿಕ್ ಕಾರ್ಡ್ ವಿತರಣೆ ಹಾಗೂ ಸನ್ಮಾನಿಸುವಂತೆ ಸೂಚನೆ ನೀಡಿದರು.
ಮುಖ್ಯ ಸಮಾರಂಭದಲ್ಲಿ ಮತದಾನದ-ಮತದಾರರ ಮಹತ್ವ ಕುರಿತ ಉಪನ್ಯಾಸ, ಪ್ರತಿಜ್ಞಾವಿಧಿ ಬೋಧಿಸಲು ಕ್ರಮ ಕೈಗೊಳ್ಳಬೇಕು. ಪದವಿ ಕಾಲೇಜ್, ದ್ವಿತೀಯ ಪಿಯು ಕಾಲೇಜ್, ಎನ್‍ಸಿಸಿ, ಎನ್‍ಎಸ್‍ಎಸ್, ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಬೇಕು. ಮುಖ್ಯ ಸಮಾರಂಭ ವ್ಯವಸ್ಥಿತವಾಗಿ ನಿರ್ವಹಣೆಗೆ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸುವಂತೆ ತಹಸಿಲ್ದಾರರಿಗೆ ಸೂಚಿಸಿದ ಅವರು ಮತದಾನ ಮಹತ್ವ ಕುರಿತ ಜಾಗೃತಿ ಸಾಕ್ಷ ಚಿತ್ರ ನಿರ್ವಹಣೆ ಜವಾಬ್ದಾರಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ವಹಿಸಲು ಸೂಚಿಸಿ ಪದವಿ ಕಾಲೇಜ್, ಪದವಿ ಪೂರ್ವ ಕಾಲೇಜ್, ಅಕ್ಕಮಹಾದೇವಿ ಮಹಿಳಾ ವಿವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆಯಿಂದ ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು. ಅದರಂತೆ ಆಯಾ ತಾಲೂಕಾ ಕೇಂದ್ರಗಳ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಆಯಾ ಗ್ರಾಮ ಪಂಚಾಯತಿಗಳಲ್ಲಿ ಜ. 24ರಂದು ಮತದಾರರ ದಿನಾಚರಣೆ ಹಾಗೂ ಪ್ರತಿಜ್ಞಾವಿಧಿ ಸ್ವಿಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಔದ್ರಾಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.