ನಿಷೇಧಿತ ಸಂಘಟನೆ ಸಿಮಿ ಹುಟ್ಟಿದ್ದು ವಿಜಯಪುರದಲ್ಲಿ, ಅದರ ಪ್ರತಿರೂಪ ಪಿಎಫ್ಐ, ಎಸ್​ಡಿಪಿಐ: ಯತ್ನಾಳ್

author img

By

Published : Sep 27, 2022, 8:52 PM IST

Etv Bharapfi-and-sdpi-another-counterpart-of-simi-should-be-banned

ಪಿಎಫ್ಐ ಮತ್ತು ಎಸ್​ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅನ್ನೋದು ದೇಶಭಕ್ತರ ಆಗ್ರಹವಿದೆ. ಪ್ರಧಾನಿ, ಗೃಹಮಂತ್ರಿಗಳು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಿಶ್ಚಿತವಾಗಿ ಶೀಘ್ರದಲ್ಲೇ ಪಿಎಫ್ಐ, ಎಸ್​ಡಿಪಿಐ ಸಂಘಟನೆಗಳು ಬ್ಯಾನ್ ಆಗುತ್ತವೆ ಎನ್ನುವ ವಿಶ್ವಾಸವಿದೆ ಎಂದು ಯತ್ನಾಳ್ ಹೇಳಿದರು.

ವಿಜಯಪುರ: ನಿಷೇಧಿತ ಸಂಘಟನೆ ಸಿಮಿಯ ಮತ್ತೊಂದು ಪ್ರತಿರೂಪವಾಗಿರುವ ಪಿಎಫ್ಐ ಮತ್ತು ಎಸ್​ಡಿಪಿಐ ಬ್ಯಾನ್ ಮಾಡಬೇಕು. ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾರ್ವಜನಿಕ ಪ್ರದೇಶದಲ್ಲಿ ಬಾಂಬ್ ಹಾಕುವಂತಹ ಪ್ರಯತ್ನ ಮಾಡಿದ್ದರು. ಇವರ ಮೇಲೆ ಇಂತಹ ಅನೇಕ ಗಂಭೀರ ಆರೋಪಗಳು ಇದೆ. ಕೇಂದ್ರ ಸರ್ಕಾರ ಅತ್ಯಂತ ದೃಢ ನಿಲುವು ತಗೊಂಡು, ಇಡೀ ದೇಶದ ಇತಿಹಾಸದಲ್ಲಿ ಒಂದೇ ರಾತ್ರಿ 200 ಕಡೆಗಳಲ್ಲಿ ದಾಳಿ ಮಾಡಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಪಿಎಫ್ಐ ಹಾಗೂ ಕೆಲ ಸಂಘಟನೆಗಳ ಮುಖಂಡರ ಕಾರ್ಯಕರ್ತರ ಬಂಧನ ವಿಚಾರವಾಗಿ ವಿಜಯಪುರ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಸ್ಥಳೀಯ ಅವರು, ದಾಳಿ ವೇಳೆ ವಿದೇಶಿ ಹಣದ ದಾಖಲೆ ಸಿಕ್ಕಿವೆ. ಎರಡು ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅನ್ನೋದು ದೇಶಭಕ್ತರ ಆಗ್ರಹವಿದೆ. ಪ್ರಧಾನಿ, ಗೃಹಮಂತ್ರಿಗಳು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ನಿಶ್ಚಿತವಾಗಿ ಶೀಘ್ರದಲ್ಲೇ ಪಿಎಫ್ಐ, ಎಸ್​ಡಿಪಿಐ ಸಂಘಟನೆಗಳು ಬ್ಯಾನ್ ಆಗುತ್ತವೆ ಎನ್ನುವ ವಿಶ್ವಾಸವಿದೆ ಎಂದರು.

ನಿಷೇಧಿತ ಸಂಘಟನೆ ಸಿಮಿ ಹುಟ್ಟಿದ್ದು ವಿಜಯಪುರದಲ್ಲಿ

ಸಿಮಿ ದೇಶ ವಿರೋಧಿ ಚಟುವಟಿಕೆ ಮೊದಲು ಆರಂಭವಾಗಿದ್ದೇ ವಿಜಯಪುರದಲ್ಲಿ. ಅದು ಇಡೀ ದೇಶದಲ್ಲಿ ಬೆಳೆದು ಸಿಮಿ ಆಗಿತ್ತು. ನಂತರ ಪಿಎಫ್ಐ ಆಗಿ ಪರಿವರ್ತನೆ ಆಗಿದೆ. ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದರು.

ಇದನ್ನೂ ಓದಿ : ಎಸ್​ಡಿಪಿಐ PFI ಎರಡೂ ದೇಶದ್ರೋಹಿ ಸಂಘಟನೆಗಳು: ಪ್ರಮೋದ್ ಮುತಾಲಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.