ETV Bharat / state

ಹಿರಿಯ ಕಾಂಗ್ರೆಸ್ ಮುಖಂಡ ಶೃಂಗಾರಗೌಡ ಪಾಟೀಲ ಇನ್ನಿಲ್ಲ

author img

By

Published : Jul 24, 2020, 9:36 AM IST

Updated : Jul 24, 2020, 10:24 AM IST

ಹಿರಿಯ ಕಾಂಗ್ರೆಸ್ ಮುಖಂಡ ,ಪುರಸಭೆ ಮಾಜಿ ಅಧ್ಯಕ್ಷ ಎಸ್.ಜಿ.ಪಾಟೀಲ ನಿಧನರಾಗಿದ್ದಾರೆ.

SG Patil
SG Patil

ಮುದ್ದೇಬಿಹಾಳ: ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಪುರಸಭೆ ಮಾಜಿ ಅಧ್ಯಕ್ಷ ಎಸ್.ಜಿ.ಪಾಟೀಲ (ಶೃಂಗಾರಗೌಡ) ನಿಧನರಾಗಿದ್ದಾರೆ.

ಮುದ್ದೇಬಿಹಾಳ ಮತ ಕ್ಷೇತ್ರದ ಮಾಜಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಬಲಗೈ ಆಗಿದ್ದ ಶೃಂಗಾರಗೌಡರು ತಾಲೂಕಿನಲ್ಲಿ ಜನಪರ ಕೆಲಸಗಳಲ್ಲಿ ತೊಡಗಿಸಿಕೊಂಡು ತಮ್ಮದೇ ವಿಶೇಷ ಛಾಪು ಮೂಡಿಸಿದ್ದರು.

ಶೃಂಗಾರಗೌಡರು ಪಟ್ಟಣದ ಹಲವು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದರು. ಬಸವ ಸಮಿತಿ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದು, ಮುದ್ದೇಬಿಹಾಳದಲ್ಲಿ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Last Updated :Jul 24, 2020, 10:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.