ETV Bharat / state

ಸಿದ್ದೇಶ್ವರ ಶ್ರೀಗೆ ಮುಂದುವರಿದ ಚಿಕಿತ್ಸೆ, ಸಾವಿರಾರು ಅಭಿಮಾನಿಗಳ ಆಗಮನ; ಅನ್ನದಾಸೋಹ ವ್ಯವಸ್ಥೆ

author img

By

Published : Jan 2, 2023, 11:07 AM IST

Updated : Jan 2, 2023, 11:19 AM IST

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ದೌಡಾಯಿಸುತ್ತಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Sri Siddeshwear swamiji health condition  Sri Siddeshwear swamiji health bulletin  Sri Siddeshwear swamiji health news  thousands of devtees visit to Jnana Yoga Ashram  ಸಿದ್ದೇಶ್ವರ ಶ್ರೀ ಹೆಲ್ತ್​ ಬುಲೆಟಿನ್​ ಬಿಡುಗಡೆ  ಸಹಸ್ರಾರು ಭಕ್ತಾದಿಗಳು ಆಗಮನ  ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ  ಸಹಸ್ರಾರು ಭಕ್ತಾದಿಗಳು ಆಶ್ರಮದತ್ತ ಮುಖ  ಆಶ್ರಮದ ಸುತ್ತ ಮುತ್ತ ಬಿಗಿ ಪೊಲೀಸ್​ ಬಂದೋಬಸ್ತ್​ ಶ್ರೀಗಳ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ  ಪೊಲೀಸ್​ ಇಲಾಖೆ ಹೈಅಲರ್ಟ್  Sri Siddeshwear swamiji health update  Sri Siddeshwear swamiji news
ಸಿದ್ದೇಶ್ವರ ಶ್ರೀ ಹೆಲ್ತ್​ ಬುಲೆಟಿನ್​ ಬಿಡುಗಡೆ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗೆ ಮುಂದುವರಿದ ಚಿಕಿತ್ಸೆ

ವಿಜಯಪುರ: ಇಲ್ಲಿನ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಶ್ರಮಕ್ಕೆ ಇಂದು ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ ಎಂ.ಬಿ.ಪಾಟೀಲ, ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ನಿಜಗುಣಾನಂದ ಸ್ವಾಮೀಜಿ, ಸಿಂದನೂರಿನ ಮಾಜಿ ಶಾಸಕ ಹಂಪನ ಗೌಡ ಮತ್ತು ಬಾದರ್ಲಿ ಶ್ರೀಗಳು ದರ್ಶನಕ್ಕೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

ವೈದ್ಯರ ಹೇಳಿಕೆ: 'ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರಿಗೂ ಆತಂಕ ಬೇಡ. ಗಂಜಿ, ಜ್ಯೂಸ್‌ನಂತಹ ಆಹಾರವನ್ನು ಅವರಿಗೆ ನೀಡಲಾಗುತ್ತಿದೆ. ಅವರ ಪಲ್ಸ್‌ ರೇಟ್‌, ಬಿಪಿ ಚೆನ್ನಾಗಿದೆ' ಎಂದು ಡಾ.ವಿಜಯ್ ಪಾಟೀಲ್​ ಮಾಧ್ಯಮಗಳಿಗೆ ತಿಳಿಸಿದರು.

ಸಿದ್ದೇಶ್ವರ ಶ್ರೀಗಳ ಆರೋಗ್ಯದ ಬಗ್ಗೆ ಆತಂಕಗೊಂಡಿರುವ ಸಾವಿರಾರು ಭಕ್ತರು, ಅಭಿಮಾನಿಗಳು ಜ್ಞಾನಯೋಗಾಶ್ರಮದತ್ತ ಧಾವಿಸುತ್ತಿದ್ದಾರೆ. ಈಗಾಗಲೇ ಸಾವಿರಕ್ಕೂ ಹೆಚ್ಚು ಮಂದಿ ಆಶ್ರಮದ ಆವರಣದಲ್ಲಿಯೇ ತಂಗಿದ್ದಾರೆ. ಅನ್ಯರಾಜ್ಯದಿಂದಲೂ ಜನರು ಬರುತ್ತಿದ್ದಾರೆ. ಆಶ್ರಮದ ಆಡಳಿತ ಮಂಡಳಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಅನೇಕ ಭಕ್ತಾದಿಗಳು ಶ್ರೀಗಳು ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಆಶ್ರಮದ ಸುತ್ತ ಪೊಲೀಸ್​ ಭದ್ರತೆ​: ಆಶ್ರಮದ ಸುತ್ತಮುತ್ತ ಪೊಲೀಸ್ ಇಲಾಖೆ ವಿಶೇಷ ಭದ್ರತೆ ಕೈಗೊಂಡಿದೆ. ಗದಗ, ಬಾಗಲಕೋಟೆ ಜಿಲ್ಲೆಯಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಎಸ್ಪಿ-5, ಸಿಪಿಐ-20, ಪಿಎಸ್ಐ-50, ಎಎಸ್ಐ -100, ಸಿಎಚ್​ಸಿ-ಸಿಪಿಸಿ 1,000 ಸಿಬ್ಬಂದಿ ಇದ್ದಾರೆ.

ಇದೇ ವೇಳೆ, ಆಶ್ರಮಕ್ಕೆ ಗಣ್ಯರು ಭೇಟಿ ನೀಡಿ ಭಕ್ತರಿಗೆ ಮಾಹಿತಿ ನೀಡುತ್ತಿದ್ದಾರೆ. ನಿನ್ನೆ ರಾತ್ರಿಯೂ ಸಹ ಗಣ್ಯರು ಆಗಮಿಸಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಸಿದ್ದೇಶ್ವರ ಸ್ವಾಮಿಗಳ ಆರೋಗ್ಯ ಸ್ಥಿರವಾಗಿದೆ. ನಾಡಿಮಿಡಿತ​ ಎಲ್ಲವೂ ಸರಿಯಾಗಿದೆ ಎಂದು ಹೇಳಿದ್ದರು.

ಅಥಣಿ ಶಾಸಕ ಮಹೇಶ್​ ಕುಮಟಳ್ಳಿ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಶ್ರೀಗಳು ನಡೆದಾಡುವ ದೇವರು. ಅವರ ಜೊತೆಗೆ ಇರುವ ನಾವೇ ಧನ್ಯರು. ಅವರು ಶೀಘ್ರದಲ್ಲೇ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಶ್ರೀಗಳ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶ್ರೀಗಳ ಆರೋಗ್ಯ ಸುಧಾರಣೆ ಆಗುತ್ತಿದೆ. ಆತಂಕಪಡುವ ಅವಶ್ಯಕತೆ ಇಲ್ಲ. ಸಾಮಾಜಿಕ‌ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿಸುವುದನ್ನು ನಿಲ್ಲಿಸಬೇಕು. ಅವರ ಪ್ರವಚನವನ್ನು ನಾವಿನ್ನೂ ಕೇಳಬೇಕಿದೆ ಎಂದರು.

ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಸ್ವಾಮೀಜಿ, ವಿಜಯೇಂದ್ರ

Last Updated : Jan 2, 2023, 11:19 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.