ETV Bharat / state

ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ.. ಪಂಚಭೂತಗಳಲ್ಲಿ ಲೀನರಾದ ಜ್ಞಾನಯೋಗಿ

author img

By

Published : Jan 3, 2023, 7:18 AM IST

Updated : Jan 3, 2023, 9:23 PM IST

ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ- ಪಂಚಭೂತಗಳಲ್ಲಿ ಲೀನರಾದ ಕರುನಾಡ ಸಂತ- ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು ಗಣ್ಯರು ಭಾಗಿ

Siddeshwar Swamiji passed away
Siddeshwar Swamiji passed away

ವಿಜಯಪುರ: ನಾಡು ಕಂಡ ಪ್ರಸಿದ್ಧ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ದೇಶ್ವರ ಶ್ರೀಗಳ ಮೃತದೇಹದ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಲಾಯಿತು. ರಾಜ್ಯ ಸರ್ಕಾರದಿಂದಲೇ ಎಲ್ಲಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಅಂತಿಮವಾಗಿ ವಿಜಯರಪುರದ ಜ್ಞಾನಯೋಗಾಶ್ರಮದ ಸಂತನಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ದೇಶದ ಆಧ್ಯಾತ್ಮಿಕ ಚಿಂತಕರರೊಬ್ಬರು ಪಂಚಭೂತಗಳಲ್ಲಿ ಲೀನರಾದರು. ಶ್ರೀಗಳ ಅಗಲಿಕೆಯ ಗೌರವಾರ್ಥ ವಿಜಯಪುರ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು.

ಅಂತಿಮ ದರ್ಶನಕ್ಕೆ ವ್ಯವಸ್ಥೆ: ಜ್ಞಾನಯೋಗಾಶ್ರಮದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ನಂತರ ಸೈನಿಕ ಶಾಲೆ ಆವರಣಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಂಜೆ 5 ಗಂಟೆಯ ನಂತರ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮಠಾಧೀಶರು, ರಾಜ್ಯ ಮತ್ತು ಕೇಂದ್ರ ಸರಕಾರದ ಸಚಿವರು, ಶಾಸಕರು ಹಾಗು ಅಪಾರ ಭಕ್ತ ಸಮೂಹ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: 'ಶ್ರೀಗಳ ಅಂತಿಮ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ನಿರ್ದೇಶಿಸಿದೆ. ಅಂತಿಮ ದರ್ಶನಕ್ಕೆ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ಸರ್ಕಾರ ರಜೆ ಘೋಷಿಸಲಾಗಿತ್ತು. ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ' ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದರು.

ಜಿಲ್ಲಾಡಳಿತವು ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆಯವರೆಗೆ ತರಲಿದೆ. ಬೆಳಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿಜಯಪುರ ನಗರದ ಸೈನಿಕ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನಕ್ಕಾಗಿ ಸೋಲಾಪುರ, ಕಲಬುರಗಿ, ಸಿಂದಗಿ, ಬಾಗಲಕೋಟೆ, ಜಮಖಂಡಿ, ಅಥಣಿಯಿಂದ ಆಗಮಿಸುವ ಭಕ್ತಾದಿಗಳು ನೇರವಾಗಿ ವಿಜಯಪುರ ನಗರದ ರಿಂಗ್ ರೋಡ್ ಮೂಲಕ (ಇಟಗಿ ಪೆಟ್ರೋಲ್ ಪಂಪ್) ಜಿಲ್ಲಾ ಆಸ್ಪತ್ರೆಯ ಹಿಂಭಾಗದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಈ ಸ್ಥಳದಲ್ಲಿಯೇ ಭಕ್ತರಿಗೆ ಪ್ರಸಾದ, ನೀರು, ಇನ್ನಿತರೆ ವ್ಯವಸ್ಥೆ ಮಾಡಲಾಗಿತ್ತು. ಸಾರ್ವಜನಿಕರು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸೈನಿಕ ಶಾಲೆಯ ಎದುರುಗಡೆ ಇರುವ ನೇತಾಜಿ ಸುಭಾಷ್ ಚಂದ್ರ ಬೋಸ್, ರಸ್ತೆಯ ಮೂಲಕ ನಡೆದುಕೊಂಡು ಸೈನಿಕ ಶಾಲೆಯ ಮುಖ್ಯ ದ್ವಾರದ ಮೂಲಕ ಪ್ರವೇಶಿಸಬೇಕು. ದರ್ಶನದ ನಂತರ ಸೈನಿಕ ಶಾಲೆಯ 2ನೇ ಗೇಟ್ ಮೂಲಕ (ಲೆಫ್ಟಿನೆಂಟ್ ಕರ್ನಲ್ ಅಜಿತ್ ಭಂಡಾರಕರ ದ್ವಾರ) ಹೊರಗಡೆ ಬಂದು ತಮ್ಮ ವಾಹನ ಮೂಲಕ ವಾಪಸ್ ತೆರಳಿದರು. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3.00 ಗಂಟೆಯಿಂದ ಸಾಯಂಕಾಲದವರೆಗೆ ಸರ್ಕಾರದ ವತಿಯಿಂದ ಸಕಲ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಸಂಜೆ ಪುನಃ ತೆರೆದ ವಾಹನದಲ್ಲಿ ಪಾರ್ಥಿವ ಶರೀರವನ್ನು ಸೈನಿಕ ಶಾಲೆಯಿಂದ ಜ್ಞಾನಯೋಗಾಶ್ರಮಕ್ಕೆ ತರಲಾಯಿತು. (ಮಾರ್ಗ: ಗೋದಾವರಿ-ಶ್ರೀ ಶಂಕರಲಿಂಗ ದೇವಸ್ಥಾನ-ಶಿವಾಜಿವೃತ್ತ - ಗಾಂಧಿವೃತ್ತ- ಶ್ರೀ ಸಿದ್ದೇಶ್ವರ ದೇವಸ್ಥಾನ-ಬಿ.ಎಲ್.ಡಿ.ಇ. ಆಸ್ಪತ್ರೆ-ಶ್ರೀ ಜ್ಞಾನಯೋಗಾಶ್ರಮ) ಭಕ್ತಾದಿಗಳು ರಸ್ತೆಯ ಇಕ್ಕೆಲೆಗಳಲ್ಲಿ ನಿಂತುಕೊಂಡು ಅಂತಿಮ ನಮನ ಸಲ್ಲಿಸಬಹುದು.

ರಾತ್ರಿ 9 ಗಂಟೆ ಸುಮಾರಿಗೆ ಆಶ್ರಮದ ಆವರಣದಲ್ಲಿ ವಿಧಿವಿಧಾನಗಳಂತೆ ನೆರವೇರಿಸಲಾಯಿತು. ಆವರಣದಲ್ಲಿ ಸ್ಥಳಾವಕಾಶದ ಅಭಾವವಿದ್ದು ಭಕ್ತಾದಿಗಳು ಸೈನಿಕ ಶಾಲೆಯಲ್ಲಿಯೇ ಅಂತಿಮ ದರ್ಶನ ಪಡೆದರು. ಯಾವುದೇ ಆತಂತಕ್ಕೆ ಒಳಗಾಗದೇ ಶಾಂತ ರೀತಿಯಿಂದ ವರ್ತಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಿದ್ದರು.

ಇದನ್ನೂ ಓದಿ: ವಿರಮಿಸಿದ ಜ್ಞಾನಯೋಗಿ.. ಶ್ರೇಷ್ಠ ಸಂತ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತ

Last Updated :Jan 3, 2023, 9:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.