ETV Bharat / state

ಯಾದಗಿರಿ ಜಿಲ್ಲೆಯಲ್ಲಿ ಚಿತ್ತಾ ಮಳೆ ರಗಳೆ; ಜಲಾವೃತಗೊಂಡ ಸೇತುವೆಗಳು

author img

By

Published : Oct 14, 2020, 8:20 PM IST

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಅರ್ಭಟಕ್ಕೆ ಹತ್ತಿಕುಣಿ ಜಲಾಶಯ ಮತ್ತೆ ಭರ್ತಿಯಾಗಿದ್ದು, ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.

Heavy rain in Yadagiri district
ಜಲಾವೃತಗೊಂಡ ಸೇತುವೆ

ಯಾದಗಿರಿ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತಾಲೂಕಿನ ಚಾಮನಹಳ್ಳಿಯಿಂದ ಜಿಲ್ಲಾ ಕೇಂದ್ರ ಯಾದಗಿರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತಗೊಂಡ ಹಿನ್ನೆಲೆ ಸಂಚಾರ ದುಸ್ತರವಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ

ಮಳೆಯ ಅರ್ಭಟಕ್ಕೆ ಹತ್ತಿಕುಣಿ ಜಲಾಶಯ ಮತ್ತೆ ಭರ್ತಿಯಾಗಿದ್ದು, ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ. ಪರಿಣಾಮ ಹಳ್ಳ ಉಕ್ಕಿ ಹರಿಯುತ್ತಿದ್ದು ಚಾಮನಹಳ್ಳಿ-ಯಾದಗಿರಿ ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಹಳ್ಳದ ನೀರು ಪಕ್ಕದ ಜಮೀನುಗಳಿಗೆ ನುಗ್ಗಿದ್ದು ಹತ್ತಿ, ಭತ್ತ ಸೇರಿದಂತೆ ವಿವಿಧ ಬೆಳೆಗಳು ನೀರುಪಾಲಾಗಿವೆ. ಪರಿಣಾಮ ಭಾರಿ ಹಾನಿ ಉಂಟಾಗಿದೆ. ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.