ನಾರಾಯಣಪುರ ಜಲಾಶಯದಿಂದ ನೀರು ಬಿಡುವ ಸಾಧ್ಯತೆ : ನದಿ ಪಾತ್ರದ ಜನರಿಗೆ ಜಿಲ್ಲಾಧಿಕಾರಿ ಸೂಚನೆ

author img

By

Published : Jul 23, 2021, 4:35 PM IST

ನದಿ ಪಾತ್ರದ ಜನರಿಗೆ ಜಿಲ್ಲಾಧಿಕಾರಿ ಸೂಚನೆ

ಯಾವುದೇ ತುರ್ತು ಸಂದರ್ಭದಲ್ಲಿ ನದಿ ಪಾತ್ರ ಮತ್ತು ಹಳ್ಳಗಳ ಕಡೆಗೆ ಜನ ಮತ್ತು ಜಾನುವಾರುಗಳು ಹಾಗೂ ಮೀನುಗಾರರು ನದಿ ತೀರಿಕ್ಕೆ ಹೋಗದಂತೆ ಎಚ್ಚರವಹಿಸಬೇಕೆಂದು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯತ್ ಮೂಲಕ ಎಲ್ಲಾ ಹಳ್ಳಿಗಳಿಗೆ ಡಂಗುರ ಸಾರಲಾಗಿದೆ..

ಯಾದಗಿರಿ : ಕೃಷ್ಣಾ ಮತ್ತು ಭೀಮಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಮತ್ತು ಭೀಮಾ ನದಿಗೆ ನೀರನ್ನು ಬಿಡುವ ಸಾಧ್ಯತೆಯಿರುತ್ತದೆ. ಪ್ರಸ್ತುತ ಕೃಷ್ಣ ನದಿಯಿಂದ 2,30,680 ಕ್ಯೂಸೆಕ್ ಹಾಗೂ ಭೀಮಾ ನದಿಯಿಂದ 13,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದೆ.

ಇಂದು ನಾರಾಯಣಪುರ ಜಲಾಶಯದಿಂದ 3,00,000 ಕ್ಯೂಸೆಕ್‌ ನೀರು ಹರಿದು ಬರುವ ಸಾಧ್ಯತೆ ಇದೆ. ಕಾರಣ ನೀರು ಹರಿದು ಬಂದಾಗ ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಸೇತುವೆಯು ಮುಳುಗಡೆಯಾಗುವ ಮತ್ತು ಸೇತುವೆ ರಸ್ತೆ ಸಂಪರ್ಕವು ಕಡಿತಗೊಳ್ಳುವ ಸಾಧ್ಯತೆ ಇರುತ್ತದೆ.

ಸದರಿ ಸೇತುವೆಯನ್ನು ನಿಗಾವಹಿಸಲು ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಿ ಮುಂಜಾಗ್ರತಾಕ್ರಮ ಕೈಗೊಳ್ಳಲಾಗಿದೆ. ಹಾಗೂ ಸದರಿ ಸೇತುವೆಯ ಮೂಲಕ ಜನಗಳ ಮತ್ತು ವಾಹನಗಳ ಸಾಗಾಟ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಆದೇಶವನ್ನು ಪಾಲಿಸಲು ಕೋರಲಾಗಿದೆ.

ಯಾವುದೇ ತುರ್ತು ಸಂದರ್ಭದಲ್ಲಿ ನದಿ ಪಾತ್ರ ಮತ್ತು ಹಳ್ಳಗಳ ಕಡೆಗೆ ಜನ ಮತ್ತು ಜಾನುವಾರುಗಳು ಹಾಗೂ ಮೀನುಗಾರರು ನದಿ ತೀರಿಕ್ಕೆ ಹೋಗದಂತೆ ಎಚ್ಚರವಹಿಸಬೇಕೆಂದು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯತ್ ಮೂಲಕ ಎಲ್ಲಾ ಹಳ್ಳಿಗಳಿಗೆ ಡಂಗುರ ಸಾರಲಾಗಿದೆ.

ನದಿ ತೀರದಲ್ಲಿ ಬರುವ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಾಂದರ್ಭಿಕ ಅನುಸಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಅಗತ್ಯ ಬಿದ್ದಲ್ಲಿ ಜನ ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ನಿರ್ದೇಶನ ನೀಡಲಾಗಿದೆ. ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಜನರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ.

ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253800 ಸಂಖ್ಯೆಗೆ ಕರೆ ಮಾಡಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಕೋರಿದ್ದಾರೆ.

ಇದನ್ನೂ ಓದಿ : ಕುಂಭದ್ರೋಣ ಮಳೆಗೆ ನಲುಗಿದ ಮಹಾರಾಷ್ಟ್ರ.. ಭೂ ಕುಸಿತದಿಂದಾಗಿ ಈವರೆಗೆ 36 ಜನರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.