ಚಿಕ್ಕಮಗಳೂರು: ಡ್ರೋನ್ ಮೂಲಕ ಕಾಡಾನೆಗಳ ಹುಡುಕಾಟ!
Published on: Dec 2, 2022, 7:01 PM IST

ಚಿಕ್ಕಮಗಳೂರು: ಕಾಫೀನಾಡಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಡ್ರೋನ್ ಮೂಲಕ ಕಾಡಾನೆಗಳ ಹುಡುಕಾಟಕ್ಕೆ ಮುಂದಾಗಿದೆ. ಇತ್ತೀಚೆಗೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ಪ್ರತ್ಯಕ್ಷವಾಗಿದ್ದವು. ಅಲ್ಲದೇ ಕಾಫಿ ತೋಟದಲ್ಲೇ ಕಾಡಾನೆಗಳು ಬೀಡು ಬಿಟ್ಟಿದ್ದು, ಸ್ಥಳಿಯರಲ್ಲಿ ಆತಂಕ ಮನೆ ಮಾಡಿದೆ. ಅಲ್ಲದೇ ಆನೆ ಕಂಡಂತಹ ಪ್ರದೇಶಗಳಿಗೆ ತೆರಳಿ ಮೈಕ್ ಮೂಲಕ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸುತ್ತಿದ್ದಾರೆ. ಇನ್ನು ಮೂಡಿಗೆರೆ ತಾಲೂಕಿನ ಕುಂದೂರು, ತಳವಾರದ ಬಳಿಯೂ ಆನೆಗಳು ಕಂಡು ಬಂದಿದ್ದು, ಅಲ್ಲಿಯೂ ಡ್ರೋನ್ ಮೂಲಕ ಹುಡುಕಾಟದ ಕಾರ್ಯಾಚರಣೆ ಮುಂದುವರೆದಿದೆ.
Loading...