ಐತಿಹಾಸಿಕ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆಗೆ ವಿದ್ಯುಕ್ತ ಚಾಲನೆ..
Published on: Jan 23, 2023, 7:29 PM IST |
Updated on: Jan 23, 2023, 8:54 PM IST
Updated on: Jan 23, 2023, 8:54 PM IST

ಭಟ್ಕಳ: ಕರಾವಳಿ ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಜಾತ್ರೆ, ಸೋಮವಾರದಿಂದ ಆರಂಭವಾಗಿರುವ ಈ ಜಾತ್ರೆ, 9 ದಿನಗಳ ಕಾಲ ನಡೆಯಲಿದೆ. ಜಾತ್ರೆಗೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಆಡಳಿತಾಧಿಕಾರಿ ಹಾಗೂ ತಹಶೀಲ್ದಾರ್ ಅಶೋಕ್ ಭಟ್ಟ ಮಾಹಸತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇನ್ನು, ಸಾವಿರಾರು ಭಕ್ತರು ದೇವಸ್ಥಾನದ ಬಳಿ ಸರತಿ ಸಾಲಿನಲ್ಲಿ ನಿಂತು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮಧ್ಯಾಹ್ನ ಮೊದಲ ದಿನ ಭಕ್ತರಿಗೆ ಮಹಾಸತಿ ದೇವಸ್ಥಾನ ವತಿಯಿಂದ ಅನ್ನಸಂತರ್ಪಣೆ ವ್ಯವಸ್ಥೆ ಏರ್ಪಡಿಸಲಾಗಿತ್ತು. ಮಂಗಳವಾರ ಜಾತ್ರೆಯ 2ನೇ ದಿನ ವಿಶೇಷ ಕೆಂಡಸೇವೆ ಜರುಗಲಿದೆ. ದೇವಸ್ಥಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Loading...