ದೇಶದ ಹಲವೆಡೆ ಭುಗಿಲೆದ್ದ ಆಕ್ರೋಶ... ಟ್ರೈನ್​ಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು!

By

Published : Jun 17, 2022, 10:28 AM IST

Updated : Feb 3, 2023, 8:23 PM IST

thumbnail

ಉತ್ತರಪ್ರದೇಶದ ಮತ್ತು ಬಿಹಾರದಲ್ಲಿ ಅಗ್ನಿಪಥ್​ ಯೋಜನೆ ವಿರೋಧಿಸಿ ತಮ್ಮ ಉಗ್ರ ರೂಪದ ಪ್ರತಿಭಟನೆ ತೀವ್ರಗೊಂಡಿದೆ. ಉತ್ತರ ಪ್ರದೇಶದ ಬಲಿಯಾದಲ್ಲಿ ಯುವಕರು ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲನ್ನು ಧ್ವಂಸಗೊಳಿಸಿದ್ದಾರೆ. ಪ್ರತಿಭಟನಾಕಾರರು ನಗರದ ಹಲವು ಅಂಗಡಿಗಳ ನುಗ್ಗಿ ವಸ್ತುಗಳನ್ನು ನಾಶಪಡಿಸಿದರು. ಗಲಾಟೆ ಸೃಷ್ಟಿಸುತ್ತಿದ್ದ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಪ್ರತಿಭಟನಾಕಾರರನ್ನು ಬಂಧಿಸಲಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್ಕರನ್ ನಾಯರ್ ಹೇಳಿದ್ದಾರೆ. ಬಿಹಾರದಲ್ಲಿ ಮೂರನೇ ದಿನವೂ ಪ್ರತಿಭಟನೆ ಮುಂದುವರಿದಿದೆ. ಬಕ್ಸರ್, ಲಖಿಸರಾಯ್‌, ಸಮಸ್ತಿಪುರ್, ಹಾಜಿಪುರ್, ಬೆಟ್ಟಿಯಾ, ಖಗರಿಯಾ ಮತ್ತು ಅರಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಲಖಿಸರಾಯ್‌ನಲ್ಲಿಯೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ವಿಕ್ರಮಶಿಲಾ ಎಕ್ಸ್‌ಪ್ರೆಸ್‌ನ 10 ಬೋಗಿಗಳಿಗೆ ಬೆಂಕಿ ಹಚ್ಚಿದರೆ, ಸಮಸ್ತಿಪುರದಲ್ಲಿ ಜಮ್ಮುತಾವಿ-ಗುವಾಹಟಿ ಎಕ್ಸ್‌ಪ್ರೆಸ್ ರೈಲಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದರು.

Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.