ಭದ್ರಾವತಿ ವಿಎಸ್​ಎಲ್ ಕಾರ್ಖಾನೆ ಉಳಿಸಲು ಬಿಎಸ್​ವೈ ಒತ್ತಾಯ: ಕಾರ್ಖಾನೆ ಸ್ಥಗಿತಗೊಳಿಸದಂತೆ ಕ್ರಮ ಎಂದ ಸಚಿವ ಜೆ.ಸಿ.ಮಾಧುಸ್ವಾಮಿ

By

Published : Feb 15, 2023, 3:40 PM IST

thumbnail

ಬೆಂಗಳೂರು : ಭದ್ರಾವತಿ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆ (ವಿಎಸ್‍ಎಲ್)  ಉಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ.

ಇಂದು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಸಂಗಮೇಶ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಕಾರ್ಖಾನೆ ಮುಚ್ಚದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಹೇಗಾದರೂ ಮಾಡಿ ಕಾರ್ಖಾನೆ ಉಳಿಸುವ ಪ್ರಯತ್ನ ಮಾಡುತ್ತೇವೆ. ಕಾರ್ಖಾನೆ ಮುಚ್ಚುವ ಪ್ರಸ್ತಾವನೆ ಸಲ್ಲಿಸಿದ್ದು, ನಿಮ್ಮ ಸರ್ಕಾರವೇ ಎಂದು ಶಾಸಕರಿಗೆ ತಿರುಗೇಟು ನೀಡಿದರು. ನಿಮ್ಮ ಬೆನ್ನನ್ನು ನೋಡಿಕೊಳ್ಳಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ವಿಎಸ್‍ಎಲ್ ಕಾರ್ಖಾನೆ ಉಳಿಸಿಕೊಳ್ಳಲೇಬೇಕು. ಕೆಲಸ ಸ್ಥಗಿತವಾಗದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡುವುದರ ಜೊತೆಗೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಸ್ಥಗಿತಗೊಳ್ಳದಂತೆ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಈ ವಿಚಾರಕ್ಕೆ ದನಿಗೂಡಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಖಾಶೆಂಪೂರ್ ಹಾಗೂ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು, ವಿಎಸ್‍ಎಲ್ ಕಾರ್ಖಾನೆ ಮುಚ್ಚದಂತೆ ಕ್ರಮ ಕೈಗೊಳ್ಳಲು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ:  ಭದ್ರಾವತಿ ವಿಐಎಸ್​ಎಲ್​ ಕಾರ್ಖಾನೆ ಮುಂದುವರಿಸಲು ಕೇಂದ್ರದ ಜೊತೆ ಮಾತುಕತೆ: ಸಚಿವ ಆರಗ ಜ್ಞಾನೇಂದ್ರ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.