ಅಗ್ನಿಪಥ್​ ವಿರೋಧಿಸಿ ಭಾರತ್​ ಬಂದ್​: ದೆಹಲಿಯಲ್ಲಿ ಭಾರಿ ಟ್ರಾಫಿಕ್​ ಜಾಮ್​, ರೈಲುಗಳೂ ರದ್ದು

By

Published : Jun 20, 2022, 12:43 PM IST

Updated : Feb 3, 2023, 8:24 PM IST

thumbnail

ಕಳೆದ ವಾರ ಕೇಂದ್ರ ಸರ್ಕಾರವು ಜಾರಿಗೆ ತಂದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕೆಲವು ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿವೆ. ಹೀಗಾಗಿ ನವದೆಹಲಿಯಲ್ಲಿ 80 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಸೋಮವಾರ ದೆಹಲಿ-ಎನ್‌ಸಿಆರ್‌ನಾದ್ಯಂತ ಭಾರಿ ಟ್ರಾಫಿಕ್ ಜಾಮ್ ಕಂಡುಬಂದಿದೆ. ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಭಾರಿ ಟ್ರಾಫಿಕ್ ಜಾಮ್‌ ಆಗಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಅಗ್ನಿಪಥ್ ಯೋಜನೆ ವಿರುದ್ಧ ಭಾರತ್ ಬಂದ್​ ಹಿನ್ನೆಲೆ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರೆ, ಹಲವು ರಾಜ್ಯಗಳ ವಿವಿಧ ರೈಲು ನಿಲ್ದಾಣಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

Last Updated : Feb 3, 2023, 8:24 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.