ಮಥುರಾ.. ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಲೋರಿನ್​ ಅನಿಲ ಸೋರಿಕೆ : 10 ನರ್ಸಿಂಗ್​ ವಿದ್ಯಾರ್ಥಿನಿಯರು ಅಸ್ವಸ್ಥ

By ETV Bharat Karnataka Team

Published : Nov 3, 2023, 4:06 PM IST

thumbnail

ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿ ಮುಖ್ಯ ವೈದ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಸಿಲಿಂಡರ್​ನಿಂದ ಕ್ಲೋರಿನ್​ ಅನಿಲ ಸೋರಿಕೆಯಾಗಿ 10 ಜನ ನರ್ಸಿಂಗ್​ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಇಂದು ನಡೆದಿದೆ. ಕಚೇರಿ ಆವರಣದಲ್ಲಿ ಶೇಖರಿಸಲಾಗಿದ್ದ ಸಿಲಿಂಡರ್​ನಿಂದ ಅನಿಲ ಸೋರಿಕೆಯಾಗಿದೆ. ಈ ವೇಳೆ ಕೆಲವು ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಘಟನೆಯಲ್ಲಿ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಎಲ್ಲ ವಿದ್ಯಾರ್ಥಿನಿಯರು ಚೇತರಿಸಿಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಅನಿಲ ಸೋರಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 

ಘಟನೆ ಬಗ್ಗೆ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ.ಭೂದೇವ್​ ಸಿಂಗ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿಯಲ್ಲಿ ಆವರಣದಲ್ಲಿದ್ದ ಸಿಲಿಂಡರ್ ಕ್ಲೋರಿನ್ ಸೋರಿಕೆಯಾಗಿ, ಗಾಳಿಯಲ್ಲಿ ಹರಡಿದೆ. ಇದರಿಂದ 10 ಜನ ನರ್ಸಿಂಗ್​ ವಿದ್ಯಾರ್ಥಿನಿಯರು ಕುಸಿದು ಬಿದ್ದಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಂಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.  

ಇದನ್ನೂ ಓದಿ: ಖಾಸಗಿ ಜೈವಿಕ ಅನಿಲ ಘಟಕದಲ್ಲಿ ಗ್ಯಾಸ್ ಸೋರಿಕೆ: ಓರ್ವ ಸಾವು, ನಾಲ್ವರು ಅಸ್ವಸ್ಥ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.