ವಿಜಯದಶಮಿ: ನಾಡಿನ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Oct 24, 2023, 4:11 PM IST

thumbnail

ಮೈಸೂರು: ಕನ್ನಡ ನಾಡಿನ ಜನರಿಗೆ ಮೈಸೂರು ದಸರಾ ಮಹೋತ್ಸವ, ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಮಳೆ, ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು ಶ್ರೀ ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುವುದಾಗಿ ತಿಳಿಸಿದರು.

ಮಂಗಳವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ವಿಜಯದಶಮಿ ಹಬ್ಬ. ಮಧ್ಯಾಹ್ನ ನಂದಿಧ್ವಜ ಪೂಜೆ ನೆರವೇರಿಸಿ, ನಂತರ ಜಂಬೂಸವಾರಿಯ ಅಂಬಾರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆ ಬನ್ನಿಮಂಟಪಕ್ಕೆ ತಲುಪಿದ ನಂತರ ಪಂಜಿನ ಕವಾಯತು ರಾತ್ರಿ 8 ರವರೆಗೆ ನಡೆಯಲಿದೆ. ಮಳೆ ಅಭಾವ, ವಿದ್ಯುತ್ ಕೊರತೆಯಿಂದ ರೈತರಿಗೆ ತೊಂದರೆಯಾಗಿದೆ. ರಾಜ್ಯದಲ್ಲಿ ಮಳೆಯಾಗಿ, ರೈತರು ಬೆಳೆದ ಬೆಳೆಗಳು ಉಳಿಯುವಂತಾಗಲಿ ಎಂದು ಹಾರೈಸಿದರು.   

ಈಗಾಗಲೇ ದಸರಾ ಮಹೋತ್ಸವದ ನಂದಿ ಪೂಜೆ 1.46 ರಿಂದ 2.08 ರ ಶುಭ ಮಕರ ಲಗ್ನದಲ್ಲಿ ನೆರವೇರಿದೆ. ಸ್ತಬ್ಧಚಿತ್ರಗಳು ಹಾಗೂ ಕಲಾತಂಡಗಳ ಮೆರವಣಿಗೆ ಆರಂಭವಾಗಿದೆ. ಸಂಜೆ 4.40 ರಿಂದ 5 ಗಂಟೆಯೊಳಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಿದ್ದಾರೆ. 

ಇದನ್ನೂ ಓದಿ: ಅರಮನೆಯ ಸವಾರಿ ತೊಟ್ಟಿಯಲ್ಲಿ ರೋಚಕ ವಜ್ರಮುಷ್ಠಿ ಕಾಳಗ : ಏನಿದರ ಇತಿಹಾಸ ಗೊತ್ತಾ?

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.