ಬಾಗಲಕೋಟೆ: ಡೀಸೆಲ್​ ತುಂಬಿದ್ದ ಟ್ಯಾಂಕರ್​ ಪಲ್ಟಿಯಾಗಿ ಬೆಂಕಿಗಾಹುತಿ

By

Published : Oct 18, 2022, 1:14 PM IST

Updated : Feb 3, 2023, 8:29 PM IST

thumbnail

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ತುಂಬಿದ್ದ ಟ್ಯಾಂಕರ್​ವೊಂದು ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಬೆಂಕಿಗೆ ಆಹುತಿ ಆಗಿರುವ ಘಟನೆ ನಗರದಲ್ಲಿ ಲೋಕಾಪುರ ಪಟ್ಟಣದ ಕೇಶವ ಸಿಮೆಂಟ್ ಕಾರ್ಖಾನೆ ಬಳಿ ನಡೆದಿದೆ. ಸುಮಾರು 20 ಸಾವಿರ ಲೀಟರ್​ ಡೀಸೆಲ್​ ತುಂಬಿದ್ದ ಟ್ಯಾಂಕರ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದ ಪರಿಣಾಮ ಕ್ಷಣಾರ್ಧದಲ್ಲೇ ಇಡೀ ಟ್ಯಾಂಕರ್​ ಬೆಂಕಿಗೆ ಆಹುತಿ ಆಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಡೀಸೆಲ್ ಹಾನಿಯಾಗಿದೆ. ಅದೃಷ್ಟವಶಾತ್​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಸಮಯ ವಾಹನಗಳ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್​ ಉಂಟಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Feb 3, 2023, 8:29 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.