ಕೊಪ್ಪಳದಲ್ಲಿ ಚುನಾವಣಾ ಪ್ರಚಾರ ಆರಂಭ: ಮತ ಕೇಳಲು ಬಂದ ಶಾಸಕರಿಗೆ ಗ್ರಾಮಸ್ಥರಿಂದ ತರಾಟೆ

By

Published : Apr 3, 2023, 8:32 PM IST

thumbnail

ಕೊಪ್ಪಳ: ಗುಡಿಗೇರಿ ಗ್ರಾಮದಲ್ಲಿ ಇಂದು ಚುನಾವಣ ಪ್ರಚಾರ ಆರಂಭಿಸಿದ್ದ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಗುಡಿಗೇರಿಯ ಶ್ರೀಶರಣಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುವ ಮೂಲಕ ಪ್ರಚಾರ ಆರಂಭಿಸಿದ ಶಾಸಕ ಹಿಟ್ನಾಳ ಬೆಂಬಲಿಗರೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಹೊರಟಿದ್ದರು. 

ಈ ಸಂದರ್ಭದಲ್ಲಿ ಮತ ಕೇಳಲು ಬಂದ ಶಾಸಕರಿಗೆ, ಕಳೆದ 10 ವರ್ಷದಿಂದ ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಮನೆಗಳನ್ನು ನಿರ್ಮಿಸಿದ್ದರೂ ಹಣ ಬಿಡುಗಡೆಯಾಗಿಲ್ಲ. ಮೂರು ದಿನಕ್ಕೊಮ್ಮೆ ನೀರು ಬರುತ್ತದೆ. ಸರಿಯಾದ ರಸ್ತೆ ಇಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ಮಾತ್ರ ನಾವೆಲ್ಲ ನೆನಪಾಗುತ್ತೇವೆ. ಚುನಾವಣೆ ಮುಗಿದ ಬಳಿಕ ನಾವು ಯಾರು ಎಂಬುದು ನಿಮಗೆ ಲೆಕ್ಕಕ್ಕೆ ಇರೋದಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.     

ಚುನಾವಣಾ ಪ್ರಚಾರ ಆರಂಭಿಸಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್​​, 10 ವರ್ಷದಲ್ಲಿ ಎರಡು ಚುನಾವಣೆಯಲ್ಲಿ ಗೆಲ್ಲಿಸಿದ ಅಂತರಕ್ಕಿಂತ ಈ ಬಾರಿ ಡಬಲ್ ಅಂತರದಿಂದ ಜನ ಗೆಲ್ಲಿಸುತ್ತಾರೆ. ಕೊಪ್ಪಳ ಮಾತ್ರವಲ್ಲ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರದಲ್ಲಿಯೂ ಸಮಸ್ಯೆಗಳಿವೆ. ಸೇವೆ ಮಾಡೋರನ್ನು ಜನ ಗುರುತಿಸುತ್ತಾರೆ ಎಂಬ ವಿಶ್ವಾಸವಿದೆ. ಹಾಗಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತೇವೆ. 10 ವರ್ಷದಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 4,500 ಕೋಟಿ ಅನುದಾನದಿಂದ ಕ್ಷೇತ್ರ ಅಭಿವೃದ್ದಿ ಪಡಿಸಲಾಗಿದೆ ಎಂದರು.    

ಇದನ್ನೂ ಓದಿ : ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕೆಆರ್​ಪಿಪಿ ಸಂಸ್ಥಾಪಕ ಸೇರಿ ಐದು ಜನರ ಮೇಲೆ ಪ್ರಕರಣ ದಾಖಲು

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.