ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಅಗ್ನಿಗಾಹುತಿ: ವಿಡಿಯೋ

By ETV Bharat Karnataka Team

Published : Sep 30, 2023, 6:42 PM IST

thumbnail

ಬೆಂಗಳೂರು : ಚಲಿಸುತ್ತಿದ್ದ ಎಲೆಕ್ಟ್ರಿಕ್​ ಕಾರಿನಲ್ಲಿ ದಿಢೀರ್​​ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ಜೆ.ಪಿ ನಗರದಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಜೆ.ಪಿ ನಗರದಲ್ಲಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಇಡೀ ಕಾರು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ದೃಶ್ಯವು ಮೊಬೈಲಿನಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್​ ಆಗಿದೆ. 

ಕಾರಿನಲ್ಲಿದ್ದ ಕೆಲ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ವೇಳೆ, ರಸ್ತೆಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿತ್ತು. ಬಳಿಕ ಸ್ಥಳದಿಂದ ಸುಟ್ಟು ಕರಕಲಾದ ವಾಹನವನ್ನು ತೆರವುಗೊಳಿಸಲಾಗಿದೆ. ಎಲೆಕ್ಟ್ರಿಕ್​ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗುತ್ತಿರುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿರುತ್ತವೆ. ಅಲ್ಲದೆ ಮನೆಯಲ್ಲಿ ಚಾರ್ಜಿಂಗ್​ಗೆ ಇರಿಸಿದ ಎಲೆಕ್ಟ್ರಿಕ್​ ಸ್ಕೂಟರ್​ಗಳಲ್ಲಿ ಬೆಂಕಿಗಾಹುತಿಯಾಗಿರುವ ಘಟನೆಗಳು ಕೆಲವೆಡೆ ನಡೆದಿವೆ. ​

 ಇದನ್ನೂ ಓದಿ : ಸಮುದ್ರ ತೀರಕ್ಕೆ ಕೊಚ್ಚಿಕೊಂಡು ಬಂದ ಬ್ರಿಟಿಷರ ಕಾಲದ ಬೃಹತ್ ಮರದ ಪೆಟ್ಟಿಗೆ... ಒಡೆದಾಗ ಸಿಕ್ಕಿದೇನು?.. ವಿಡಿಯೋ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.