ಶಾರ್ಟ್​ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ: ಒಂದೇ ಕುಟುಂಬದ ಮೂವರ ಸಾವು, 5 ಜನರಿಗೆ ಗಾಯ

By

Published : Apr 5, 2023, 9:35 AM IST

thumbnail

ಅಮೃತಸರ: ಇಲ್ಲಿಯ ರಾಮ್ ನಗರ ಕಾಲೋನಿಯ ರೋಸ್ ಎನ್‌ಕ್ಲೇವ್‌ನಲ್ಲಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ತಜೀಂದರ್ ಸಿಂಗ್, ಪತ್ನಿ ಮನ್ದೀಪ್ ಕೌರ್ ಮತ್ತು ಕಿರಿಯ ಮಗ ದಿಲ್ಪ್ರೀತ್ ಸಿಂಗ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಮೃತರ ಸಂಬಂಧಿಯಾದ ಸಿಮ್ರಾನ್ ಪ್ರತಿಕ್ರಿಯಿಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ. ಇದರಲ್ಲಿ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ನನಗೆ ಕರೆ ಬಂದಿದ್ದು, ಮನೆಗೆ ಬೆಂಕಿ ಬಿದ್ದಿರುವ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. 

ರಾಮ್ ನಗರ ಕಾಲೋನಿಯ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮನೆಯ ನೆರೆ ಹೊರೆಯವರು ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆ ಗುರ್ವಿಂದರ್ ಸಿಂಗ್ ಎಂಬುವವರಿಗೆ ಸೇರಿದ್ದಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಗುಡಿಸಲಿಗೆ ಬೆಂಕಿ: ಸುಖ ನಿದ್ರೆಯಲ್ಲಿದ್ದ ಮೂವರು ಮಕ್ಕಳು, ದಂಪತಿ ದಾರುಣ ಸಾವು 

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.