ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನ: ಕಾಂಗ್ರೆಸ್ ನಾಯಕರಿಂದ ಗೌರವ ನಮನ- ವಿಡಿಯೋ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನದ ಅಂಗವಾಗಿ ಸಮಾಧಿ ಇರುವ 'ಶಕ್ತಿ ಸ್ಥಳ'ಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
1917ರ ನವೆಂಬರ್ 19ರಂದು ಜನಿಸಿದ ಇಂದಿರಾ ಗಾಂಧಿ 1966ರಿಂದ 1977ರವರೆಗೆ ಮತ್ತು 1980 ರಿಂದ 1984ರಲ್ಲಿ ಅವರ ಹತ್ಯೆಯಾಗುವವರೆಗೂ ಪ್ರಧಾನಿ ಹುದ್ದೆಯಲ್ಲಿದ್ದರು. "ಭಾರತದ ಮೊದಲ ಮಹಿಳಾ ಪ್ರಧಾನಿ ಮತ್ತು ನಮ್ಮ ಆರಾಧ್ಯ ದೈವ ಇಂದಿರಾ ಗಾಂಧಿ ಅವರ ಜನ್ಮದಿನದಂದು ನಮ್ಮ ವಿನಮ್ರ ನಮನಗಳು. ಭಾರತದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಇಂದಿರಾ ಗಾಂಧಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತಕ್ಕಾಗಿ ದಕ್ಷ ನಾಯಕತ್ವ, ನಿಜವಾದ ನಿಷ್ಠೆ ಮತ್ತು ಬಲವಾದ ಇಚ್ಛಾಶಕ್ತಿಯನ್ನು ನಿರಂತರವಾಗಿ ಪ್ರದರ್ಶಿಸಿದ್ದಾರೆ. ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ" ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನದಂದು ಅವರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಹಾವೇರಿ: ಇಂದಿರಾ ಕ್ಯಾಂಟೀನ್ ಬಿಲ್ ಹಣ ಬಿಡುಗಡೆಗೆ ಅಧಿಕಾರಿಗಳಿಂದ ಕಮಿಷನ್ ಆರೋಪ