ಮುಂದಿನ 48 - 72 ಗಂಟೆಗಳಲ್ಲಿ ಸಚಿವ ಸಂಪುಟ ರಚನೆ: ಇನ್ನೂ ಯಾವುದೂ ಅಂತಿಮವಾಗಿಲ್ಲ... ಸುರ್ಜೇವಾಲಾ

By

Published : May 17, 2023, 3:27 PM IST

thumbnail

ನವದೆಹಲಿ: ಕರ್ನಾಟಕದ ಮುಂದಿನ ಸಿಎಂ ಆಯ್ಕೆ ಕಸರತ್ತು ಇನ್ನೂ ಜಾರಿಯಲ್ಲಿದೆ. ಸದ್ಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ಜೇವಾಲಾ ತಿಳಿಸಿದರು.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಸಿಎಂ ಬಗ್ಗೆ ಪಕ್ಷ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ನಿರ್ಧಾರ ಕೈಗೊಂಡು ಶೀಘ್ರವೇ ತಿಳಿಸಲಾಗುವುದು. ಮುಂದಿನ 48- 72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಹೇಳಿದರು.

ಸಿಎಂ ಪ್ರಬಲ ಆಕಾಂಕ್ಷಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರ ಜೊತೆಗೆ ಪಕ್ಷದ ನಾಯಕ ರಾಹುಲ್​ ಗಾಂಧಿಯ ದೆಹಲಿ ನಿವಾಸದಲ್ಲಿ ಇಂದು ಬೆಳಗ್ಗೆ ಮಾತುಕತೆ ನಡೆಸಿದರು. ಬಳಿಕ ಇಬ್ಬರೂ ಅಲ್ಲಿಂದ ತೆರಳಿದರೂ ಸಿಎಂ ಯಾರೆಂಬ ಸಸ್ಪೆನ್ಸ್​ ಮಾತ್ರ ಹೊರಬೀಳಲಿಲ್ಲ. ಇದಕ್ಕೂ ಮೊದಲು ನಿನ್ನೆ ಇಡೀ ದಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನಿವಾಸದಲ್ಲಿ ಸಿಎಂ ಆಯ್ಕೆ ಕಸರತ್ತು ಜೋರಾಗೇ ನಡೆದಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಸಿದ್ದರಾಮಯ್ಯ, ಸುರ್ಜೇವಾಲಾ, ವೇಣುಗೋಪಾಲ್​ ಸೇರಿದಂತೆ ಹಲವು ನಾಯಕರೊಂದಿಗೆ ಸಭೆ ನಡೆಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್‌ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.