ರಾಯಚೂರಿನಲ್ಲಿ ರಾಜ್ಯೋತ್ಸವ: ಸಚಿವ ಡಾ.ಶರಣಪ್ರಕಾಶ್ ಪಾಟೀಲರಿಂದ ಧ್ವಜಾರೋಹಣ

By ETV Bharat Karnataka Team

Published : Nov 1, 2023, 12:23 PM IST

thumbnail

ರಾಯಚೂರು: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. 

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದರು. ನಂತರ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಾಲ್ವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದಕ್ಕೂ ಮುನ್ನ ನಗರದ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಶರಣಪ್ರಕಾಶ್ ಪಾಟೀಲ್ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿ ದೇವಿ ಪುತ್ಥಳಿ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕರಾದ ಬಸವಗೌಡ ಪಾಟೀಲ್ ದದ್ದಲ್, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಎಸ್​ಪಿ ನಿಖಿಲ್ ಬಿ, ತುಕಾರಂ ಮಾಡೇವೆ ಸೇರಿದಂತೆ ಇತರರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. 

ಇದನ್ನೂ ಓದಿ: 68ನೇ ಕನ್ನಡ ರಾಜ್ಯೋತ್ಸವ : ಕಂಠೀರವ ಸ್ಟೇಡಿಯಂನಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.