ನಿಯಂತ್ರಣ ತಪ್ಪಿ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಗೆ ಬಿದ್ದ KSRTC ಬಸ್ : ವಿಡಿಯೋ

By

Published : Aug 10, 2023, 5:13 PM IST

thumbnail

ಮಂಡ್ಯ :  ಕೆಎಸ್​ಆರ್​​ಟಿಸಿ ಬಸ್ಸೊಂದು ಇಲ್ಲಿನ ಹೆದ್ದಾರಿ ಬದಿಯಲ್ಲಿ ನೂತನ‌ ಸೇತುವೆ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಗೆ ಉರುಳಿರುವ ಘಟನೆ ಮಂಡ್ಯದ ಮಾರೇಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಾಮಗಾರಿ ಬಗ್ಗೆ ರಸ್ತೆಯಲ್ಲಿ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಗಾಯಗೊಂಡ ಬಸ್ ಚಾಲಕ ಹೇಳಿದ್ದಾರೆ.

ತಲಕಾಡಿನಿಂದ ಮಳವಳ್ಳಿ ಕಡೆಗೆ ಬರುತ್ತಿದ್ದ ಕೆಎಸ್​ಆರ್​​ಟಿಸಿ ಬಸ್ ಇಲ್ಲಿನ ಮಾರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಗುಂಡಿಗೆ ಬಿದ್ದಿದೆ.   ಇದರಿಂದಾಗಿ ಪಿಲ್ಲರ್​ಗೆ ಹಾಕಿದ್ದ ಕಬ್ಬಿಣದ ಸಲಾಕೆಗಳು ಬಾಗಿವೆ. ಅಪಘಾತದಲ್ಲಿ ಬಸ್​ ಚಾಲಕನಿಗೆ ಸ್ವಲ್ಪ ಮಟ್ಟಿನ ಗಾಯವಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 9 ರಿಂದ 12 ಜನ ಪ್ರಯಾಣಿಸುತ್ತಿದ್ದರು ಎಂದು ಬಸ್​ ಚಾಲಕ ಹೇಳಿದ್ದಾರೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಸಾರಿಗೆ ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರರಿಬ್ಬರ ದುರ್ಮರಣ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.