KSRTC ಬಸ್ಗೆ ಬೆಂಕಿ; ತಪ್ಪಿದ ಭಾರಿ ಅನಾಹುತ
ಚಿಕ್ಕೋಡಿ: ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ನಲ್ಲಿ ಇದ್ದಕ್ಕಿದ್ದಂತೆ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಈ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿ ಶನಿವಾರ ನಡೆದಿದೆ. ಇಂದು ಸಂಜೆ ಬೆಳಗಾವಿ ನಗರದಿಂದ ಹುಕ್ಕೇರಿ ಪಟ್ಟಣಕ್ಕೆ ಬಸ್ ಆಗಮಿಸುತ್ತಿತ್ತು. ಆದರೆ, ಮಾರ್ಗ ಮಧ್ಯ ಬಸ್ನ ಇಂಜಿನ್ ಭಾಗದಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20ಕ್ಕೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಣಿಕರು ಕೆಳಗೆ ಇಳಿಯುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಬಸ್ ಆವರಿಸಿಕೊಂಡಿದ್ದು, ಬಸ್ ಸುಟ್ಟು ಕರಕಲಾಗಿದೆ. ಈ ಅವಘಡದಿಂದ ಪುಣೆ ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ ಬಸ್ ಮಾತ್ರ ಸುಟ್ಟು ಕರಲಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ: ಖಾನಾಪುರ ಕೆನರಾ ಬ್ಯಾಂಕ್ಗೆ ಬೆಂಕಿ: ಕಡತ, ಪಿಠೋಪಕರಣಗಳು ಸುಟ್ಟು ಭಸ್ಮ