ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಮುಂದಾದ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಿಷೇಧಾಜ್ಞೆ ಜಾರಿ

By ETV Bharat Karnataka Team

Published : Oct 20, 2023, 5:45 PM IST

thumbnail

ಚಿಕ್ಕಮಗಳೂರು: ಜಿಲ್ಲಾಡಳಿತ ಅನುಮತಿ ನಿರಾಕರಿಸಿದ ನಡುವೆಯೂ ನಗರದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾಗಿದ್ದ ನೂರಾರು ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಶುಕ್ರವಾರ ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆಗೆ ನಡೆಸಲು ಸಿದ್ಧತೆ ನಡೆದಿತ್ತು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಹನುಮಂತಪ್ಪ ವೃತ್ತದಲ್ಲಿ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು. ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಮೆರವಣಿಗೆಯಲ್ಲಿ ಮಹಿಷಾಸುರನ ಭಾವಚಿತ್ರ ಪ್ರದರ್ಶನಕ್ಕೆ ಮುಂದಾದ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸಲಾಯಿತು.

ಸ್ಥಳದಲ್ಲಿ ಬಿಗಿ ಪೊಲೀಸ್​ ಭದ್ರತೆ ಮಾಡಲಾಗಿದೆ. ನೂರಾರು ಪೊಲೀಸರು ಸ್ಥಳದಲ್ಲಿದ್ದಾರೆ. ಮಹಿಷ ದಸರಾ ಆಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಇದರಿಂದ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ ಕಾರಣ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 19 ರಿಂದ 24ರ ವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದರು.

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.