ಸರಳತೆ ಮೆರೆದ ಮಂಡ್ಯ ಮಣ್ಣಿನ ಮಗ.. ಪದಗ್ರಹಣ ಸಮಾರಂಭಕ್ಕೆ ಸಾಮಾನ್ಯ ಬೋಗಿಯಲ್ಲಿ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ

By

Published : May 20, 2023, 12:05 PM IST

thumbnail

ಮಂಡ್ಯ: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಾಂಗ್ರೆಸ್​ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್​ ಪುಟ್ಟಣ್ಣಯ್ಯ ಎಲ್ಲರ ಗಮನ ಸೆಳೆದಿದ್ದಾರೆ.

ದರ್ಶನ್​ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆ ಮೆರೆದಿದ್ದಾರೆ. ಬರಮೋಡ ಹಾಗೂ ಟೀ ಶರ್ಟ್ ಧರಿಸಿ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಆಹ್ವಾನದ ಮೇರೆಗೆ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶುಕ್ರವಾರ ರಾತ್ರಿ ಪಾಂಡವಪುರ ರೈಲು ನಿಲ್ದಾಣದಿಂದ ದರ್ಶನ್‌ ಪ್ರಯಾಣ ಬೆಳೆಸಿದ್ದರು.

ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ದರ್ಶನ್​ ಪುಟ್ಟಣ್ಣಯ್ಯ ಅವರು ಪುಟ್ಟರಾಜು ವಿರುದ್ಧ ಜಯಗಳಿಸಿದ್ದಾರೆ. ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್​ ಬೆಂಬಲ ನೀಡಿತ್ತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ದರ್ಶನ್​ ಪುಟ್ಟಣ್ಣಯ್ಯ ಅವರ ಮೇಲೆ ಜನರಿಗೆ ಹೆಚ್ಚಿನ ನಿರೀಕ್ಷೆಯಿದೆ.

ಇದನ್ನೂ ಓದಿ:  ಮೇಲುಕೋಟೆ ಕ್ಷೇತ್ರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪಾದಯಾತ್ರೆ : ಚುನಾವಣೆ ಪ್ರಚಾರ ಆರಂಭಿಸಿದ ರೈತ ಸಂಘ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.