Kabini Reservoir: ಕಬಿನಿ ಜಲಾಶಯ ಭರ್ತಿ: 10,000 ಕ್ಯೂಸೆಕ್ ನೀರು ಬಿಡುಗಡೆ

By

Published : Jul 25, 2023, 11:10 AM IST

thumbnail

ಮೈಸೂರು: ಕೇರಳದ ವಯನಾಡು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೆಚ್‌.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ 10 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 

ವಾಡಿಕೆಯಂತೆ ವಯನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಬಿನಿಗೆ ಯಥೇಚ್ಛ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯದ ಪ್ರಮುಖ ನಾಲ್ಕು ಗೇಟ್​ಗಳ ಮೂಲಕ ಸುಮಾರು 5,000 ಕ್ಯೂಸೆಕ್​ ನೀರು ಮತ್ತು ಸುಭಾಷ್ ಪವರ್ ಸ್ಟೇಷನ್​ನಿಂದ ಸುಮಾರು 5,000 ಕ್ಯೂಸೆಕ್​ ನೀರನ್ನು ಹೊರ ಬಿಡಲಾಗುತ್ತಿದೆ. ಹೀಗೆ ಜಲಾಶಯದಿಂದ ಒಟ್ಟು ಹತ್ತು ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಲಾಗಿದೆ. 

20 ಸಾವಿರ ಕ್ಯೂಸೆಕ್ ನೀರು ಒಳ ಹರಿವಿನಿಂದ ಬಂದಿದೆ. ಕಬಿನಿಯಿಂದ ನೀರನ್ನು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ನೀರು ಧುಮುಕುತ್ತಿರುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಸ್ಥಳೀಯರು ಹಾಗೂ ಪ್ರವಾಸಿಗರು ಜಲಾಶಯದತ್ತ ಮುಖ ಮಾಡಿದ್ದಾರೆ. ನೀರಿನ ಪ್ರಮಾಣ ಹೆಚ್ಚಾದಂತೆ ಕಬಿನಿ ಜಲಾಶಯದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹಗ ಆತಂಕ ಎದುರಾಗಿದೆ.

ಇದನ್ನೂ ಓದಿ: Karnataka Rains: ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಧಾರಾಕಾರ ಮಳೆ; ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.