ಮದ್ಯಪಾನ ಮಾಡಿ ಹಿಮ್ಮುಖವಾಗಿ ಬಸ್ ಚಲಾಯಿಸಿದ ಚಾಲಕ!- ವಿಡಿಯೋ

By ETV Bharat Karnataka Team

Published : Oct 22, 2023, 10:02 PM IST

thumbnail

ಪುಣೆ (ಮಹಾರಾಷ್ಟ್ರ): ಮದ್ಯದ ಅಮಲಿನಲ್ಲಿದ್ದ ಚಾಲಕ ಬಸ್ಸನ್ನು ಹಿಮ್ಮುಖವಾಗಿ ಚಲಾಯಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸೇನಾಪತಿ ಬಾಪಟ್ ರಸ್ತೆಯಲ್ಲಿ ಶನಿವಾರ ಘಟನೆ ನಡೆಯಿತು. ಬೇಜವಾಬ್ದಾರಿ ತೋರಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, MH 14 HU 5725 ನೋಂದಣಿ ಸಂಖ್ಯೆಯ ಬಸ್ ಚಿಂಚ್‌ವಾಡ್‌ಗಾಂವ್ ಕಡೆಗೆ ಹೋಗುವಾಗ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. "ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿತ್ತು. ಹಂಪ್ ತಪ್ಪಿಸಲು ಚಾಲಕ ವೇಗವಾಗಿ ಬಸ್‌ ಚಲಾಯಿಸಿದ್ದಾನೆ. ಈ ವೇಳೆ ಬಸ್​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿ ಕಿರುಚಾಡಿದ್ದಾರೆ. ನಂತರ ಕೆಲವರು ಚಾಲಕನನ್ನು ಬಲವಂತವಾಗಿ ನಿಲ್ಲಿಸಿ, ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದರು'' ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಕೋಲಿ ಮಾಹಿತಿ ನೀಡಿದರು.

ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದರಿಂದ ಪುಣೆಯಲ್ಲಿ ಪಿಎಂಟಿ ಆಡಳಿತ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ಅಡ್ಡಾದಿಡ್ಡಿಯಾಗಿ ಬಸ್​ ಚಾಲನೆ ಆರೋಪ: ಖಾಸಗಿ ಬಸ್​ ಮಾಲೀಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.