ಜೆಡಿಎಸ್ ಕಚೇರಿ ಕಾಂಪೌಂಡ್ ಮೇಲೆ ಪೋಸ್ಟರ್ ಅಂಟಿಸಿದ ಕಿಡಿಗೇಡಿಗಳು; ಪೊಲೀಸರಿಂದ ತೆರವು- ವಿಡಿಯೋ

By ETV Bharat Karnataka Team

Published : Nov 15, 2023, 10:36 AM IST

thumbnail

ಬೆಂಗಳೂರು: ಜೆಡಿಎಸ್ ಕಚೇರಿ ಜೆ.ಪಿ.ಭವನದ ಕಾಂಪೌಂಡ್ ಗೋಡೆ ಮೇಲೆ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಎಂಬ ಪೋಸ್ಟರ್ ಅಂಟಿಸಲಾಗಿದೆ. ಇದು ಕಿಡಿಗೇಡಿಗಳ ಕೃತ್ಯವೇ? ಅಥವಾ ಯಾವುದಾದರೂ ಪಕ್ಷದ ಕಾರ್ಯಕರ್ತರ ಕೆಲಸವೇ? ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆದರೆ, ಪೊಲೀಸರು ಪೋಸ್ಟರ್​ಗಳನ್ನು ತೆಗೆದು ಹಾಕಿದ್ದಾರೆ.  

ಪೋಸ್ಟರ್ ಅಂಟಿಸಿರುವ ಕಿಡಿಗೇಡಿಗಳು ಅದರಲ್ಲಿ 200 ಯೂನಿಟ್ ಉಚಿತ ವಿದ್ಯುತ್​, ನೆನಪಿಟ್ಟುಕೊಳ್ಳಿ. ಹೆಚ್ಚು ಕದಿಯಬೇಡಿ ಎಂದು ಬರೆದಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೆ.ಪಿ.ನಗರದಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಮನೆಗೆ ದೀಪಾಲಂಕಾರ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆಯಲಾಗಿತ್ತು. ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಅಚಾತುರ್ಯದಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡು ದಂಡ ಕಟ್ಟುವುದಾಗಿ ಹೇಳಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಭಾರತೀಯ ವಿದ್ಯುತ್ ಕಾಯ್ದೆ 135ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಒಪ್ಪಿಕೊಂಡಿದ್ದಕ್ಕೆ ಅಭಿನಂದನೆ : ಡಿಸಿಎಂ ಡಿ ಕೆ ಶಿವಕುಮಾರ್

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.