ಶಾರ್ಟ್ ಸರ್ಕ್ಯೂಟ್‌ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ: ವಿಡಿಯೋ

By ETV Bharat Karnataka Team

Published : Dec 12, 2023, 3:23 PM IST

thumbnail

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್‌ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ತಾಲೂಕಿನ ತಿರುಮಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಹುಬ್ಬಳ್ಳಿ ಎಂಬುವವರಿಗೆ ಸೇರಿದ ಗೋದಾಮು ಇದಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡು ಇಡೀ ಗೋದಾಮು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.‌

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹುಬ್ಬಳ್ಳಿ ಚಿಗರಿ ಬಸ್‌ನಲ್ಲಿ ಬೆಂಕಿ : ಹುಬ್ಬಳ್ಳಿ- ಧಾರವಾಡ ನಡುವೆ ತ್ವರಿತ ಬಸ್ ಸೇವೆ ನೀಡುವ ಬಿಆರ್​ಟಿಎಸ್ ಚಿಗರಿ ಬಸ್​​ನಲ್ಲಿ​ (ಡಿಸೆಂಬರ್ -6-2023) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು. ಎಪಿಎಂಸಿ ನಿಲುಗಡೆ ಬಿಆರ್‌ಟಿಎಸ್ ಬಸ್ ನಂ. KA-25 / F-3472ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಧಾರವಾಡದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ವೇಳೆ ಬಸ್​ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಈ ವೇಳೆ, ಎಚ್ಚೆತ್ತ ಬಸ್ ಚಾಲಕ, ಕೂಡಲೇ ಪ್ರಯಾಣಿಕರನ್ನು ಬಸ್​ನಿಂದ ಇಳಿಸಿದ್ದರು. ಬಳಿಕ ಬಸ್​ಗೆ ಹತ್ತಿದ್ದ ಬೆಂಕಿ ನಂದಿಸಲು ಯತ್ನಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಚಿಗರಿ ಬಸ್‌ನಲ್ಲಿ ಬೆಂಕಿ: 30ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.