ನನ್ನ ಸ್ಪರ್ಧೆ ನಿರ್ಧಾರ ಮಾಡೋಕೆ ಅವರ್ಯಾರು?: ಬಿಎಸ್​ವೈ ವಿರುದ್ಧ ಸಿದ್ದರಾಮಯ್ಯ ಗರಂ

By

Published : Feb 23, 2023, 12:29 PM IST

thumbnail

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪನವರು ಚುನಾವಣಾ ಕಣದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಿದ್ದು, ನಿನ್ನೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ತಮ್ಮ ವಿದಾಯದ ಭಾಷಣ ಮಾಡಿದ್ದಾರೆ. ಬಿಎಸ್​ವೈಗೆ ವಯಸ್ಸಾಗಿದೆ ಎಂದು ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿದ್ರು. ಅದಕ್ಕಾಗಿ ಅವರು ವಿದಾಯದ ಭಾಷಣ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ನನ್ನ ಮೇಲೆ ಪ್ರೀತಿ ಇದೆ. ಅವರಿಗೆ ದೇವರು ಆಯುಷ್ಯ, ಆರೋಗ್ಯ ನೀಡಲೆಂದು ಪ್ರಾರ್ಥಿಸುತ್ತೇನೆ. ಇದೇ ಕಾರಣಕ್ಕೆ ನನಗೆ ಬಿಎಸ್​ವೈ ಬಾದಾಮಿಯಿಂದ ಸ್ಪರ್ಧಿಸಲಿ ಎಂದು ಸಲಹೆ ನೀಡಿದ್ದಾರೆ.‌ ನಾನು ಎಲ್ಲಿ ಸ್ಪರ್ಧಿಸಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಯಡಿಯೂರಪ್ಪ ಹೇಳಿದ ಹಾಗೆ ನಿಲ್ಲುವುದಕ್ಕೆ ಆಗುವುದಿಲ್ಲ. ಅವರ್ಯಾರು ನನ್ನ ಸ್ಪರ್ಧೆ ನಿರ್ಧಾರ ಮಾಡೋಕೆ? ಎಂದು ಯಡಿಯೂರಪ್ಪ ವಿರುದ್ಧ ಗರಂ ಆದರು. ಬಳಿಕ ದೇವರಹಿಪ್ಪರಗಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಎಂ.ಬಿ.ಪಾಟೀಲ್​, ಜಮೀರ್​ ಅಹಮ್ಮದ್​ ಖಾನ್​ ಜತೆ ತೆರಳಿದರು.

ಇದನ್ನೂ ಓದಿ: ನಾನು ಚುನಾವಣೆಗೆ ನಿಲ್ಲೋದಿಲ್ಲ, ಮತ್ತೆ ಸದನಕ್ಕೆ ಬರೋದಿಲ್ಲ: ಭಾವುಕರಾಗಿ ನುಡಿದ ಬಿಎಸ್​ವೈ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.