ಚಾರ್ಮಾಡಿ ಘಾಟ್​ನಲ್ಲಿ ಎರಡು ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿ: 10 ಕಿ ಮೀಗೂ ಹೆಚ್ಚು ದೂರ ಟ್ರಾಫಿಕ್ ಜಾಮ್

By

Published : Jul 7, 2023, 7:35 PM IST

thumbnail

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್ ಭಾಗದಲ್ಲಿ ನಿತ್ಯ ನಿರಂತರ ಧಾರಾಕಾರ ಮಳೆ ಸುರಿಯುತ್ತಿದ್ದು, ಹತ್ತು ಹಲವಾರು ಅವಘಡಗಳು ಸೃಷ್ಟಿಯಾಗಿದೆ. ಇಂದು ಸರ್ಕಾರಿ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. 

ಸರ್ಕಾರಿ ಬಸ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್​ಗಳ ಡ್ರೈವರ್​ಗಳ ಕಾಲಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 2 ಬಸ್​ಗಳಲ್ಲಿ 80 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಈ ಅಪಘಾತಕ್ಕೆ ರಸ್ತೆ ಕಾಮಗಾರಿಯೇ ಕಾರಣ ಎಂದು ಹೇಳಲಾಗಿದೆ.

2019 ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯದೇ ಇರದ ಕಾರಣ ಈ ಅಪಘಾತ ಸಂಭವಿಸಿದ್ದು, ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹಿಸಲಾಗಿದೆ. ಹಾಗೂ ಚಾರ್ಮಾಡಿ ಘಾಟಿಯ ಮಂಜು ಕೂಡ ಕಾರಣ ಎನ್ನಲಾಗಿದೆ. ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಅಡಿ ದೂರದಲ್ಲಿ ಇರುವವರು ಕಾಣದಂತಹಾ ಪರಿಸ್ಥಿತಿ ನಿರ್ಮಾಣವಾಗಿದೆ. 

ಈ ಅಪಘಾತದಿಂದ ಕಿ.ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಘಾಟಿಯಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತೆ ಆಗಿದೆ. ಇನ್ನು ಕೆಲ ಪ್ರಯಾಣಿಕರು 10 ಕಿ.ಮೀ ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡುವ ಕೆಲಸ ಮಾಡುತ್ತಿದ್ದು, ರಸ್ತೆ ಉದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಇದನ್ನೂ ಓದಿ: ಎಲಿಫೆಂಟ್ ಇನ್ ಚಾರ್ಮಾಡಿ ಘಾಟ್: ಜೀವ ಭಯದಲ್ಲೇ ಬದುಕುತ್ತಿರುವ ಸಾರ್ವಜನಿಕರು

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.