ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ: ಬಲದಂಡೆ ಕಾಲುವೆ ಸುತ್ತ ಸೆಕ್ಷನ್​ 144 ಅಡಿ ನಿಷೇಧಾಜ್ಞೆ

By ETV Bharat Karnataka Team

Published : Aug 24, 2023, 2:50 PM IST

thumbnail

ಧಾರವಾಡ: ಧಾರವಾಡ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೆರೆಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆಗೊಳಿಸಲಾಗಿದೆ. ಬಲದಂಡೆ ಕಾಲುವೆ ಮೂಲಕ ನೀರು ಬಿಡುಗಡೆ ಮಾಡಿದ್ದು, ಜಿಲ್ಲೆಯ ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ ತಾಲೂಕಿನ ಕೆರೆಗಳಿಗೆ 15 ದಿನ ನಿತ್ಯ 700 ಕ್ಯೂಸೆಕ್​ ನೀರು ಬಿಡುಗಡೆ ಮಾಡಲಾಗಿದೆ.

ಈ ಹಿನ್ನೆಲೆ ಬಲದಂಡೆ ಕಾಲುವೆ ಸುತ್ತ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡುಗಡೆಯಾಗಿದೆ. ಕೃಷಿ ಪಂಪ್‌ಸೆಟ್ ಅಳವಡಿಸದಂತೆ ಡಿಸಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲುವೆ ಸುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕಾವೇರಿ ನೀರು ಗಲಾಟೆ: ಕೆಆರ್​ಎಸ್​ ಅಣೆಕಟ್ಟೆಯಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವ ವಿಚಾರಕ್ಕೆ ವಾದ ವಿವಾದ ನಡೆಯುತ್ತಲೇ ಬಂದಿದೆ. ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡದಂತೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆ ತಡೆದು ಪ್ರತಿಭಟನೆ ಕೂಡ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ರೀತಿ ಸಮರ್ಥ ವಾದ ಮಂಡಿಸಲು ಸರ್ಕಾರಕ್ಕೆ ಸಲಹೆ: ಬೊಮ್ಮಾಯಿ

ABOUT THE AUTHOR

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.